Publish Date: Mon, 03 Apr 2023 (18:16 IST)
Updated Date: Mon, 03 Apr 2023 (18:49 IST)
ಸಿಎಂ ಬಸವರಾಜ ಬೊಮ್ಮಾಯಿ ಹಾವೇರಿಯಿಂದ ಸ್ಪರ್ಧೆ ಮಾಡ್ತಾರಾ ಅಥವಾ ಕ್ಷೇತ್ರ ಬದಲಾವಣೆ ಮಾಡ್ತಾರಾ ಎಂಬ ಪ್ರಶ್ನೆಗೆ ತೆರ ಬಿದ್ದಿದೆ. 2023ರ ವಿಧಾಸಭೆ ಚುನಾವಣೆಯಲ್ಲಿ ನಾನು ಹಾವೇರಿಯ ಶಿಗ್ಗಾವಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.. ಹಾವೇರಿ ಜಿಲ್ಲೆಯ ಸವಣೂರಿನಲ್ಲಿ ಸಿಎಂ ಸ್ಪರ್ಧೆ ಕುರಿತು ಸ್ಪಷ್ಟನೆ ನೀಡಿದ್ದಾರೆ.. ಮೂರು ಬಾರಿ ಕ್ಷೇತ್ರದ ಜನ ನನ್ನನ್ನು ಬೆಂಬಲಿಸಿ, ಪ್ರೀತಿ ತೋರಿಸಿದ್ದಾರೆ. ಬೇರೆ ಕಡೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ರು. ನಾಲ್ಕು ರಾಜ್ಯಗಳ ಚುನಾವಣೆ ಬಳಿಕ, ರಾಜ್ಯದಲ್ಲಿ ಹೊಸ ರಾಜಕೀಯ ಸಂಚಲನ ಸೃಷ್ಠಿಯಾಗಿದೆ. ಇದು 2024ರ ದಿಕ್ಸೂಚಿ ಎನ್ನುವುದು ಸ್ಪಷ್ಟ. ರಾಜ್ಯದಲ್ಲಿ ಪುನಃ ಸ್ವಂತ ಶಕ್ತಿಯ ಮೇಲೆ BJP ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.