ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಗುಂಡಾಗಿರಿ ಪ್ರಕರಣವನ್ನು ಸದನದಲ್ಲಿ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್ ಪ್ರಸ್ತಾಪಿಸಿದ್ದಾರೆ.
ವಿಧಾನಸೌಧ ಕಲಾಪ ಆರಂಭವಾಗುತ್ತಿದ್ದಂತೆ ವಿಷಯ ಪ್ರಸ್ತಾಪಿಸಿದ ಜಗದೀಶ ಶೆಟ್ಟರ್ ಸರ್ಕಾರದ ವಿರುದ‌್ಧ ವಾಗ್ದಾಳಿ ನಡೆಸಿದ್ದಾರೆ. ಸದನದಲ್ಲಿ ಚರ್ಚೆ ನಡೆಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಶಾಸಕ ಹ್ಯಾರಿಸ್ ಪುತ್ರನನ್ನು ಬಂಧಿಸಲು ಪೊಲೀಸರು ವಿಳಂಬ ಮಾಡಿದ್ದಾರೆ. ಮಾಧ್ಯಮದವರ ಮೇಲೂ ಹಲ್ಲೆ ನಡೆಸಲಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ರಾಜ್ಯದಲ್ಲಿ ಸರ್ಕಾರ ಇದೆಯೋ, ಸತ್ತಿದೆಯೋ ಗೊತ್ತಾಗುತ್ತಿಲ್ಲ ಎಂದು ತಿಳಿಸಿದ್ದಾರೆ.
ಮಧ್ಯಪ್ರವೇಶಿಸಿದ ಸಿದ್ದರಾಮಯ್ಯ, ಕಾನೂನು ತನ್ನ ಕೆಲಸವನ್ನು ಮಾಡಿದೆ. ಇದನ್ನು ಸದನದಲ್ಲಿ ಚರ್ಚೆ ನಡೆಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಪ್ರಶ್ನೋತ್ತರ ಅವಧಿಯ ಬಳಿಗೆ ಚರ್ಚೆಗೆ ಅವಕಾಶ ನೀಡಲಾಗುತ್ತದೆ ಎಂದು ಭರವಸೆ ನೀಡಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.