ಮಠಗಳನ್ನು ನಿಯಂತ್ರಿಸುವ ಸುತ್ತೋಲೆಯನ್ನು ಮುಜರಾಯಿ ತಕ್ಷಣ ಹಿಂದಕ್ಕೆ ಪಡೆಯದಿದ್ದರೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್ ಕಿಡಿಕಾರಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಠಗಳನ್ನು ನಿಯಂತ್ರಿಸಲು ಮುಂದಾಗಿರುವ ಸರ್ಕಾರದ ಕ್ರಮದ ವಿರುದ್ಧ ಮಠಾಧೀಶರು ಆತಂಕಗೊಂಡಿದ್ದಾರೆ. ನಾನೂ ಹಿಂದೂ ಎಂದು ಹೇಳಿಕೊಳ್ಳುವ ಸಿದ್ಧರಾಮಯ್ಯ ಅಲ್ಪಸಂಖ್ಯಾತರ ತುಷ್ಠೀಕರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಸುತ್ತೋಲೆಯನ್ನು ಸರ್ಕಾರ ಹಿಂಪಡೆಯಬೇಕು. ಇಲ್ಲದಿದ್ದರೆ ಮಠಾಧೀಶರು ಹಾಗೂ ಭಕ್ತರೊಂದಿಗೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ ಅವರು, ಸರ್ಕಾರಕ್ಕೆ ಒಳ್ಳೆಯ ಉದ್ದೇಶವಿದ್ದರೆ ಹಿಂದೂ, ಮುಸ್ಲಿಂ, ಕ್ರೈಸ್ತ ಸೇರಿದಂತೆ ಎಲ್ಲ ಧಾರ್ಮಿಕ ಕೇಂದ್ರಗಳನ್ನು ಧಾರ್ಮಿಕ ದತ್ತಿ ವ್ಯಾಪ್ತಿಗೆ ತರಲಿ ಎಂದು ಸವಾಲು ಹಾಕಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.