ಬೆಳಗಾವಿ: ಶಿವಸೇನೆ ಕಾರ್ಯಕರ್ತರು ಮತ್ತೆ ತಮ್ಮ ಪುಂಡಾಟಿಕೆ ಮೆರೆದಿದ್ದಾರೆ. ಮಹಾರಾಷ್ಟ್ರ ಜಿಲ್ಲೆಯ ಕೊಗನಹಳ್ಳಿ ಗ್ರಾಮದಲ್ಲಿ ಕರ್ನಾಟಕದ ವಾಹನಗಳು ಮಹಾರಾಷ್ಟ್ರ ಪ್ರವೇಶಿಸದಂತೆ ತಡೆದಿದ್ದಾರೆ.
ಅಲ್ಲದೆ ಕನ್ನಡದ ನಾಮಫಲಕಗಳನ್ನು ಕಿತ್ತು ಹಾಕಿ ಕನ್ನಡಿಗರ ಮೇಲಿನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೂರಾರು ಶಿವಸೇನೆ ಕಾರ್ಯಕರ್ತರು ಕರ್ನಾಟಕದ ನೋಂದಣಿಯಿರುವ ಬಸ್ ಗಳನ್ನು ತಡೆಹಿಡಿದು ನಾಮಫಲಕ ಕಿತ್ತು ಹಾಕಿದ್ದಾರೆ.
ಕರ್ನಾಟಕ ರಾಜ್ಯೋತ್ಸವ ದಿನ ಎಂಎನ್ ಎಸ್ ಕಾರ್ಯಕರ್ತರು ಬೆಳಗಾವಿಯಲ್ಲಿ ಕರಾಳ ದಿನ ಆಚರಿಸಿದ ಮೇಲೆ ಮತ್ತೊಮ್ಮೆ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಮಹಾರಾಷ್ಟ್ರ ಬೆಂಬಲಿತ ಮೇಯರ್ ಮತ್ತು ಉಪ ಮೇಯರ್ ಕರಾಳ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದು ವಿವಾದಕ್ಕೆ ಕಾರಣವಾಗಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ