ಚುನಾವಣೆ ಹೊತ್ತಿನಲ್ಲೇ ಶಿವಕುಮಾರ್ ಗೆ ಶಾಕ್

Webdunia
ಶನಿವಾರ, 22 ಏಪ್ರಿಲ್ 2023 (08:20 IST)
ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಹೊತ್ತಿನಲ್ಲೇ ಡಿಕೆಶಿಗೆ ಹೈಕೋರ್ಟ್ ಶಾಕ್ ನೀಡಿದೆ.
 
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸರ್ಕಾರದ ಆದೇಶ ಪ್ರಶ್ನಿಸಿ ಡಿ.ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. 

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸರ್ಕಾರದ ಆದೇಶ ಪ್ರಶ್ನಿಸಿದ್ದ ಡಿಕೆಶಿ, ಸಿಬಿಐ ತನಿಖೆಗೆ ವಹಿಸಿರುವ ಸರ್ಕಾರದ ಆದೇಶ ಸರಿಯಲ್ಲ ಎಂದು ಅರ್ಜಿ ಸಲ್ಲಿಸಿದ್ದರು. ಈ ಕುರಿತು ಪರ ವಿರೋಧ ವಾದ ಮಂಡಿಸಲಾಗಿತ್ತು. ವಾದ ವಿವಾದಗಳನ್ನು ಆಲಿಸಿದ ನಂತರ ನ್ಯಾಯಮೂರ್ತಿ ನಟರಾಜನ್ ಅವರಿದ್ದ ಏಕಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿದೆ.

2019 ರಲ್ಲಿ ಬಿ.ಎಸ್ ಯಡಿಯೂರಪ್ಪ ಸರ್ಕಾರ ಡಿಕೆಶಿ ವಿರುದ್ಧದ ತನಿಖೆಗೆ ಅನುಮತಿ ನೀಡಿತ್ತು. ಆಗ ರಾಜ್ಯ ಸರ್ಕಾರದ ಅನುಮತಿ ಮೇರೆಗೆ ಸಿಬಿಐ ಎಫ್ಐಆರ್ ದಾಖಲಿಸಿತ್ತು. ಈ ಪ್ರಕರಣದ ಆಧಾರದ ಮೇರೆಗೆ ನಟರಾಜನ್ ಅವರಿದ್ದ ಪೀಠ ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇರಾನ್, ಅಮೆರಿಕಾ ಯುದ್ಧ ನಿಲ್ಲಿಸಿದ್ದು ನಾವೇ, ನಮ್ಮ ಪ್ರಧಾನಿ ತುಂಬಾ ಸ್ಟ್ರಾಂಗ್ ಎಂದು ಕೊಚ್ಚಿಕೊಳ್ಳುತ್ತಿರುವ ಪಾಕಿಸ್ತಾನ

Karnataka Weather: ಅಬ್ಬಾ.. ಇಂದು ಈ ಜಿಲ್ಲೆಗಳಲ್ಲಿ ರಣ ಭೀಕರ ಬಿಸಿಲು

ಇರಾನ್ ಮೇಲೆ ಭೀಕರ ದಾಳಿಗೆ ಬ್ರೇಕ್: ಕಡೇ ಗಳಿಗೆಯಲ್ಲಿ 15 ದಿನಗಳ ಕದನ ವಿರಾಮ

ಅಸ್ಸಾಂ, ಕೇರಳ, ಪುದುಚೇರಿ ಚುನಾವಣೆ: ಮತದಾರರನ್ನು ಒಲಿಸಿಕೊಳ್ಳಲು ನಾಯಕರ ಕೊನೆ ಹಂತದ ಪ್ರಯತ್ನ ಅಂತ್ಯ

ಇಂದು ರಾತ್ರಿ ಇಡೀ ದೇಶ ನಾಶ ಎಂದು ಬೆದರಿಕೆ ಹಾಕಿದ ಟ್ರಂಪ್: ಇರಾನ್ ಜನತೆ ಮಾಡುತ್ತಿರುವುದೇನು ಗೊತ್ತಾ Video

ಮುಂದಿನ ಸುದ್ದಿ
Show comments