ಮಂಗಳೂರು: ಬಿಜೆಪಿ ಕಾರ್ಯಕರ್ತ ದೀಪಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
‘ಸಿಎಂ ಸಿದ್ದರಾಮಯ್ಯ ಎರಡು ಮೂರು ದಿನಗಳ ನಂತರ ಕರಾವಳಿಗೆ ಭೇಟಿ ನೀಡುವವರಿದ್ದರು. ಆಗಲೇ ಇಲ್ಲಿ ಬಿಜೆಪಿ ಕಾರ್ಯಕರ್ತನ ಕೊಲೆಯಾಗಿದೆ. ಇದಕ್ಕೂ ಮೊದಲು ಶಿರಸಿಗೆ ಸಿಎಂ ಭೇಟಿಯಾಗಿದ್ದಾಗ ಪರೇಶ್ ಮೇಸ್ತಾ ಕೊಲೆಯಾಗಿತ್ತು. ಸಿಎಂ ಹೋದಲ್ಲೆಲ್ಲಾ ಹಿಂದೂ ಕಾರ್ಯಕರ್ತರ ಹೆಣ ಬೀಳುತ್ತಿದೆ’ ಎಂದು ಶೋಭಾ ಕರಂದ್ಲಾಜೆ ಗಂಭೀರ ಆಪಾದನೆ ಮಾಡಿದ್ದಾರೆ.
ಸಾಮಾನ್ಯ ಜನರು ಈ ರೀತಿ ಕೊಲೆ ಮಾಡಲು ಸಾಧ್ಯವಿಲ್ಲ. ರಾಜ್ಯ ಸರ್ಕಾರದ ಕೃಪಾಕಟಾಕ್ಷ ಇರುವುದರಿಂದಲೇ ಇಲ್ಲಿ ಇಷ್ಟೊಂದು ಕೊಲೆಯಾಗುತ್ತಿದೆ ಎಂದು ಶೋಭಾ ಕರಂದ್ಲಾಜೆ ನೇರ ಆರೋಪ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ