ನಿಮಗೆ ತಾಕತ್ತಿದ್ದರೆ ನನ್ನನ್ನು ಅರೆಸ್ಟ್ ಮಾಡಿ ನೋಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಬಹಿರಂಗ ಸವಾಲು ಹಾಕಿದ್ದಾರೆ.
ಹೊನ್ನಾವರದಲ್ಲಿ ನಡೆದ ಘಟನೆ ಸಂಬಂಧ ಶೋಭಾ ಕರಂದ್ಲಾಜೆ ವಿವಾದಾತ್ಮಕ ಟ್ವೀಟ್ ಮಾಡಿದ್ದಾರೆ ಎಂದು ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿದ ಬಗ್ಗೆ ಮುಖ್ಯಮಂತ್ರಿ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
144 ಸೆಕ್ಷನ್ ಮತ್ತು ಹೊನ್ನಾವರದ ಗಲಭೆಯನ್ನು ಅಲ್ಲಿಯ ಜಿಹಾದಿಗಳು ದುರುಪಯೋಗ ಮಾಡಿಕೊಂಡು ಬಾಲಕಿಯನ್ನು ಅತ್ಯಾಚಾರ ಎಸೆಗಿ ಕೊಲೆ ಮಾಡುವ ಕೃತ್ಯಕ್ಕೆ ಕೈ ಹಾಕಿದ್ದರು. ಅವರು ಕೇವಲ ಅತ್ಯಾಚಾರ ಮಾಡಲು ಬಂದಿದ್ದರೆ ಚಾಕು ತರುವ ಅಗತ್ಯವಿರಲಿಲ್ಲ ಎಂದಿರುವ ಶೋಭಾ ಕರಂದ್ಲಾಜೆ ಅವರು ಹೊನ್ನವರದಲ್ಲಿ ಗಾಯಗೊಂಡ ಕಾವ್ಯಾನಾಯ್ಕ್ ಹೇಳಿಕೆಯನ್ನು ಮಾಧ್ಯಮಗಳ ಮೂಲಕ ನೋಡಿದ ನಂತರ, ಟ್ವೀಟ್ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.
ಕರ್ನಾಟಕ ಸರ್ಕಾರ ಯಾವ ಕೆಳಮಟ್ಟಕ್ಕೆ ಇಳಿದಿದೆ ಎಂದರೆ ಪ್ರತಿಯೊಂದು ಪ್ರಕರಣವನ್ನು ದಾರಿ ತಪ್ಪಿಸುವ ಪ್ರಯತ್ನ ಮತ್ತು ಮುಚ್ಚಿ ಹಾಕುವ ಷಡ್ಯಂತ್ರ ಮಾಡುತ್ತಿದೆ ಆರೋಪಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.