Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಶಾಸಕ ಜಮೀರ್ ಅಹ್ಮದ್ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿರುವ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ಕಲೆ ಹಾಕುತ್ತಿದ್ದಾರೆ. ಬೆಂಗಳೂರಿನ 5 ಕಡೆಗಳಲ್ಲಿ 40ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಆದಾಯ ಮೀರಿದ ಆಸ್ತಿ ಗಳಿಕೆ ಆರೋಪ ಶಾಸಕರ ಮೇಲಿದೆ.ಬಹುಕೋಟಿ ಐಎಂಎ ವಂಚನೆ ಪ್ರಕರಣದಲ್ಲಿ ಜಮೀರ್ ಹೆಸರು ಕೇಳಿ ಬಂದಿತ್ತು. ಇಡಿ ನಿರ್ದೇಶನದ ಮೇರೆಗೆ ಕಂಟೋನ್ಮೆಂಟ್ನಲ್ಲಿರುವ ಜಮೀರ್ ಅಹಮದ್ ಖಾನ್ ನಿವಾಸ, ಸಿಲ್ವರ್ ಓಕ್ ಅಪಾರ್ಟ್ಮೆಂಟ್, ಸದಾಶಿವನಗರದಲ್ಲಿರುವ ಗೆಸ್ಟ್ ಹೌಸ್, ಬನಶಂಕರಿಯಲ್ಲಿರುವ ಜಿ.ಕೆ ಅಸೋಸಿಯೇಟ್ಸ್ ಕಚೇರಿ ಹಾಗೂ ಕಲಾಸಿಪಾಳ್ಯದಲ್ಲಿರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ಎಸಿಬಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ. 2008 ರಿಂದ ಈಚೆಗೆ ಜಮೀರ್ ಆದಾಯ ಬರೋಬ್ಬರಿ ಶೇ.2031ರಷ್ಟು ಹೆಚ್ಚಾಗಿದೆ ಎನ್ನಲಾಗಿದೆ.