Publish Date: Sun, 14 May 2023 (11:08 IST)
Updated Date: Sun, 14 May 2023 (11:10 IST)
ರಾಮನಗರ : ಕುಮಾರಸ್ವಾಮಿ ಅವರಿಗೆ ನೆಲೆ ನೀಡಿದ್ದ ರಾಮನಗರ ಜಿಲ್ಲೆಯಲ್ಲಿ ಜೆಡಿಎಸ್ಗೆ ಕಾಂಗ್ರೆಸ್ ಶಾಕ್ ನೀಡಿದೆ. ಜಿಲ್ಲೆಯಲ್ಲಿ ಮೂರು ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದುಕೊಂಡು, ಒಂದು ಕ್ಷೇತ್ರವನ್ನು ಜೆಡಿಎಸ್ ಗೆದ್ದುಕೊಂಡಿದೆ.
ರಾಮನಗರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ 87,690 ಮತಗಳಿಂದ ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ 76,975 ಸೋಲು ಕಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಗೌತಮ್ ಗೌಡ 12,912 ಪಡೆದು ಸೋತಿದ್ದಾರೆ. ಕೈ ಅಭ್ಯರ್ಥಿಯ ಗೆಲುವಿನ ಅಂತರ 10,715 ಮತಗಳಾಗಿದೆ
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ 96,5922 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗಂಗಾಧರ್ 15,374 ಸೋಲು ಕಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ 80,677 ಮತ ಪಡೆದಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಗೆಲುವಿನ ಅಂತರ 15,915 ಮತಗಳಾಗಿದೆ.