ಬೆಂಗಳೂರು: ಬಿಜೆಪಿ ಪರಿವರ್ತನಾ ಯಾತ್ರೆ ಸಮಾರೋಪಕ್ಕೆ ಕರಾಳ ದಿನದ ಶಾಕ್ ನೀಡಲು ಕೆಲವು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ. ಬೆಂಗಳೂರು ಬಂದ್ ಕೈ ಬಿಟ್ಟರೂ, ಮಹದಾಯಿ ಹೋರಾಟ ಮಾತ್ರ ನಿಂತಿಲ್ಲ. ಕರಾಳ ದಿನ ಆಚರಣೆ ನೆಪದಲ್ಲಿ ಮೋದಿಗೆ ಕಪ್ಪು ಬಾವುಟ ಪ್ರದರ್ಶಿಸಲು ಪ್ರತಿಭಟನಾಕಾರರು ಪ್ಲ್ಯಾನ್ ಮಾಡಿದ್ದಾರೆ.
ಪ್ರಧಾನಿ ಮೋದಿಗೆ ಮುತ್ತಿಗೆ ಹಾಕಲು ಹೋರಾಟಗಾರರ ನಿರ್ಧರಿಸಿದ್ದಾರೆ. ಪ್ರತಿಭಟನಾ ರ್ಯಾಲಿ ಮೂಲಕ ಮೋದಿಗೆ ಮನವಿ ಸಲ್ಲಿಸಲು ನಿರ್ಧಾರ ಮಾಡಿದ್ದಾರೆ. ವಾಟಾಳ್ ನೇತೃತ್ವದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನಾ ರ್ಯಾಲಿ ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ಫ್ರೀಡಂ ಪಾರ್ಕ್ ನಿಂದ ಅರಮನೆ ಮೈದಾನದವರೆಗೂ ರ್ಯಾಲಿ ನಡೆಯಲಿದೆ.ರ್ಯಾಲಿ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವಡೆ ಟ್ರಾಫಿಕ್ ಜಾಮ್ ಆಗುವ ಸಾಧ್ಯತೆ ಇದೆ. ಬಂದ್ ಇಲ್ಲದಿದ್ದರೂ ಬೆಂಗಳೂರಿನಲ್ಲಿಂದು ಓಡಾಡುವುದು ಕಷ್ಟವಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ