ಧಾರವಾಡ: ಧಾರವಾಡದ ಹೊರವಲಯದ ರೆಸಾರ್ಟ್ ನಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ.
ಮಯೂರ ರೆಸಾರ್ಟ್ ಯೊಂದರಲ್ಲಿ ನಡೆಯುತ್ತಿದ್ದ ಬರ್ತ್ ಡೇ ಪಾರ್ಟಿಯಲ್ಲಿ ಹನುಮಂತಗೌಡ ಹಾಗು ರಾಘವೇಂದ್ರ ಎಂಬ ಇಬ್ಬರು ವ್ಯಕ್ತಿಗಳು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಕುಡಿದ ಅಮಲಿನಲ್ಲಿ ಅವರು ಈ ಕೃತ್ಯವನ್ನು ಮಾಡಿದ್ದಾರೆ.
ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೊಳಪಡಿಸಿ, ತನಿಖೆ ನಡೆಸುತ್ತಿದ್ದಾರೆ ಎಂದು ಡಿ.ಸಿ.ಪಿ ರೇಣುಕಾ ಸುಕುಮಾರ್ ಹೇಳಿಕೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ