ಬೆಂಗಳೂರು: ಲೋಕಾಯುಕ್ತರ ಮೇಲೆ ಚೂರಿ ಇರಿತ ಘಟನೆಯಾದ ಮೇಲೆ ರಾಜ್ಯ ಸರ್ಕಾರದ ಮೇಲೆ ವಿಪಕ್ಷಗಳ ಟೀಕೆ ಹೆಚ್ಚಾಗಿದೆ. ಬಿಜೆಪಿಯ ಕೆಲ ನಾಯಕರು ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಿಕೆಯಾಗಬೇಕು ಎಂದಿದ್ದಾರೆ.
ಆದರೆ ಕೇಂದ್ರ ಸಚಿವ ಸದಾನಂದಗೌಡರು ರಾಷ್ಟ್ರಪತಿ ಆಡಳಿತ ಬೇಡವೆಂದಿದ್ದಾರೆ. ‘ಸದ್ಯದಲ್ಲೇ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಹೀಗಿರುವಾಗ ಚುನಾವಣಾ ಆಯೋಗವೇ ರಾಜ್ಯದ ಆಡಳಿತ ವ್ಯವಸ್ಥೆಯನ್ನು ನಿಯಂತ್ರಿಸಲಿದೆ. ಹಾಗಾಗಿ ರಾಷ್ಟ್ರಪತಿ ಆಡಳಿತದ ಅಗತ್ಯವಿಲ್ಲ’ ಎಂದಿದ್ದಾರೆ.
ಅತ್ತ ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ ಕೂಡಾ ರಾಷ್ಟ್ರಪತಿ ಆಡಳಿತದ ಅಗತ್ಯವಿಲ್ಲ. ಇದೆಲ್ಲಾ ರಾಜಕೀಯ ಪ್ರೇರಿತ ಹೇಳಿಕೆಗಳಿರಬಹುದು. ಅದರ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ