Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನಾಳೆಯವರೆಗೂ ಮಳೆಯ ಅಬ್ಬರ

ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನಾಳೆಯವರೆಗೂ  ಮಳೆಯ ಅಬ್ಬರ
bangalore , ಸೋಮವಾರ, 15 ನವೆಂಬರ್ 2021 (19:09 IST)
ಬೆಂಗಳೂರು: ರಾಜ್ಯದಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನಾಳೆಯವರೆಗೂ  ಮಳೆಯ ಅಬ್ಬರ ಇರಲಿದೆ. ಇತ್ತೀಚಿನ ಮಾಹಿತಿಯ ಪ್ರಕಾರ ನವೆಂಬರ್‌ 17ರ ಬಳಿಕ ಮಳೆ ಕಡಿಮೆ ಆಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 
 
ತಮಿಳುನಾಡಿನ ಚೆನ್ನೈ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರಿ ಮಳೆಗೆ ಕಾರಣವಾಗಿದ್ದ ವಾಯುಭಾರ ಕುಸಿತ ದುರ್ಬಲಗೊಂಡಿದೆ. ಆದರೆ ಮೇಲ್ಮೈ ಸುಳಿಗಾಳಿ ಮತ್ತು ಆಂಧ್ರಪ್ರದೇಶ, ಒಡಿಶಾ ಮೂಲಕ ಪಶ್ಚಿಮ ಬಂಗಾಳದ ತನಕ ಹಾದುಹೋಗಿರುವ ಟ್ರಫ್‌ ಹಾಗು ಆಗ್ನೇಯ ಅರಬ್ಬಿ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿಯ ಪ್ರಭಾವ ರಾಜ್ಯದ ಮೇಲೆ ನವೆಂಬರ್‌ 16ರವರೆಗೆ ಉಂಟಾಗಲಿದೆ ಎಂದು ಹೇಳಿದೆ. 
 
ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಗಾಳಿ, ಸಿಡಿಲು, ಮಿಂಚು ಸಹಿತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಯೆಲ್ಲೊ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ ಎಂದಿದೆ. 
 
ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಪ್ರಕಟಿಸಲಾಗಿದೆ. ಆದರೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯ ಮುನ್ಸೂಚನೆಯನ್ನು ನೀಡಲಾಗಿದೆ ಎಂದು ಮಾಹಿತಿ ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜಧಾನಿಯಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ