ದೇಶದ ಇತಿಹಾಸದಲ್ಲಿ ಶ್ರೀ ಕೃಷ್ಣದೇವರಾಯರ ಆಡಳಿತ ಸುವರ್ಣಯುಗವಾಗಿತ್ತು. ನೀವು ಕ್ಷತ್ರೀಯರು ಕೃಷ್ಣದೇವರಾಯರ ಕುಲದವರು ಅನ್ನೋದೆ ಹೆಮ್ಮೆಯ ಸಂಗತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ರಾಜೂ ಕ್ಷತ್ರೀಯ ಸಂಘದ ಸಮಾವೇಶದಲ್ಲಿ ಮಾತನಾಡಿದ ಅವರು, ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಜಾತಿ, ಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನ ಮಾಡುತ್ತಿವೆ. ಜಾತಿ ವ್ಯವಸ್ಥೆ ಮತ್ತಷ್ಟು ಬಲವಾಗುತ್ತಿದೆ. ಕ್ಷತ್ರಿಯರು ಮೊದಲು ಸ್ವಾವಲಂಬಿಗಳಾಗಬೇಕು. 2ಎ ನಲ್ಲಿರುವ ರಾಜೂ ಕ್ಷತ್ರೀಯ ಸಮಾಜವನ್ನು ಓಬಿಸಿದೆ ಸೇರಿಸಬೇಕು. ಈ ಕುರಿತು ಕೇಂದ್ರ ಮತ್ತು ರಾಜ್ಯ ಸರಕಾರವನ್ನು ಒತ್ತಾಯಿಸುತ್ತೇವೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೇಷ್ಠಪುತ್ರ ರಾಕೇಶ್ ನಿಧನಕ್ಕೆ ರಾಜೂ ಕ್ಷತ್ರೀಯ ಸಮಾವೇಶದಲ್ಲಿ ಒಂದು ನಿಮಿಷ ಮೌನ ಆಚರಿಸುವ ಮೂಲಕ ಸಂತಾಪ ಸೂಚಿಸಲಾಯಿತು.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.