Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಏರುಪೇರು

ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಏರುಪೇರು
ಬೆಂಗಳೂರು , ಸೋಮವಾರ, 21 ಜನವರಿ 2019 (11:03 IST)
ತುಮಕೂರು : ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬುದಾಗಿ ತಿಳಿದುಬಂದಿದೆ.


ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಶ್ರೀಗಳಿಗೆ ಹಳೆ ಮಠದಲ್ಲೇ ಡಾ.ಪರಮೇಶ್ ನೇತೃತ್ವದ ತಂಡ ಚಿಕಿತ್ಸೆ ನೀಡುತ್ತಿದ್ದಾರೆ. ಶ್ರೀಗಳ ಆರೋಗ್ಯದಲ್ಲಿ ಭಾನುವಾರ ರಾತ್ರಿ ಅಲ್ಪ ಏರುಪೇರಾದ ಹಿನ್ನಲೆಯಲ್ಲಿ ಮಠಕ್ಕೆ ದೊಡ್ಡ ಪ್ರಮಾಣದ ಭಕ್ತರು ಆಗಮಿಸಿ ಶ್ರೀಗಳು ಚಿಕಿತ್ಸೆ ಪಡೆಯುತ್ತಿದ್ದ ಕೋಣೆಯ ಕಿಟಿಕಿಯ ಮೂಲಕ ದರ್ಶನ ಪಡೆದು ಹೋಗುತ್ತಿದ್ದರು.


ಹಾಗೇ ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಇಂದು ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಬರ ಅಧ್ಯಯನ ಪ್ರವಾಸವನ್ನು ರದ್ದು ಮಾಡಿ ತುಮಕೂರು ಮಠಕ್ಕೆ ತೆರಳಿದ್ದಾರೆ.
ಅಲ್ಲದೇ ಸಿಎಂ ಕುಮಾರಸ್ವಾಮಿ ಅವರು ಕೂಡ ಹಿರೇಕೆರೂರು ಪ್ರವಾಸವನ್ನು ರದ್ದು ಮಾಡಿ ಶ್ರೀಗಳ ಆರೋಗ್ಯ ವಿಚಾರಿಸಲು ಮಠಕ್ಕೆ ತೆರಳಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಹಾಗೇ ಸದ್ಯದಲ್ಲೇ ಶ್ರೀಗಳಿಗೆ ಶಸ್ತ್ರಚಿಕಿತ್ಸೆ ನೀಡಿದ್ದ ಚೆನ್ನೈ ನ ರೇಲಾ ಆಸ್ಪತ್ರೆಯ ವೈದ್ಯರು ಆಗಮಿಸುವ ಸಾಧ್ಯತೆ ಇದೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮಹಾಘಟಬಂಧನ್ ಭ್ರಷ್ಟಾಚಾರ, ವಂಚನೆ, ಋಣಾತ್ಮಕತೆ ಹಾಗೂ ಅಸ್ಥಿರತೆಯಿಂದ ಆಗಿರುವ ಕೂಟ- ಪ್ರಧಾನಿ ಮೋದಿ