ಪೌರತ್ವ ತಿದ್ದುಪಡಿ ಕಾಯ್ದೆಯು ದೇಶದ ಜನರ ಪೌರತ್ವವನ್ನು ಕಿತ್ತುಕೊಳ್ಳುವುದಿಲ್ಲ. ಅಷ್ಟೇ ಅಲ್ಲದೆ, ಇಲ್ಲಿನ ನಾಗರಿಕರಿಗೂ, ರಾಷ್ಟ್ರೀಯ ಪೌರತ್ವ ಕಾಯ್ದೆಗೂ ಯಾವುದೇ ಸಂಬಂಧವಿಲ್ಲ. ಆದರೆ ಸಿದ್ದರಾಮಯ್ಯ, ಕಾಂಗ್ರೆಸ್ ಮುಖಂಡರು ಪ್ರಚೋದನೆ ನೀಡ್ತಿದ್ದಾರೆ.
ಹೀಗಂತ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪಕ್ಷದ ಬುದ್ಧಿಜೀವಿಗಳು ಮಾಡುತ್ತಿರುವ ಪ್ರಚೋದನಕಾರಿ ಹೇಳಿಕೆ ಖಂಡನೀಯ ಅಂತ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.
ಮಂಗಳೂರು ಗಲಭೆಯ ವಿಡಿಯೋ ಬಿಡುಗಡೆ ಕುರಿತು ಪ್ರತಿಕ್ರಿಯೆ ನೀಡಿ, ಸಿದ್ದರಾಮಯ್ಯನವರು ಪೊಲೀಸರ ಮೇಲೆ ಸುಖಾಸುಮ್ಮನೆ ಅಪವಾದ ಮಾಡುವುದು ಸರಿಯಲ್ಲ. ಈ ವಿಷಯದಲ್ಲಿ ಮಾಧ್ಯಮ ಪ್ರತಿನಿಧಿಗಳು ಮಾಡಿರುವ ಕಾರ್ಯ ಶ್ಲಾಘನೀಯ. ಪೌರತ್ವ ಕಾಯ್ದೆ ನೋಂದಣಿ ಕುರಿತಂತೆ ಕೇಂದ್ರ ಸರ್ಕಾರ ತನ್ನ ಸ್ಪಷ್ಟವಾದ ನಿಲುವು ಜಾರಿಗೆ ತಂದಿಲ್ಲಾ ಅಂತ ಸ್ಪಷ್ಟಪಡಿಸಿದರು.
ಪುಂಡ ಪೋಕರಿಗಳಿರುವ ಮತಾಂತರ ಸಂಘಟನೆಗಳ ಮೇಲಿರುವ 1600 ಕೇಸ್‌ಗಳನ್ನ ಸಿದ್ದರಾಮಯ್ಯ ಸಿಎಂ ಇದ್ದಾಗ ತೆಗೆದು ಹಾಕಿದ್ದರು. ನಂತರ 144 ಜಾರಿ ಮಾಡಿ ಟಿಪ್ಪು ಜಯಂತಿ ಆಚರಣೆ ಮಾಡಿ, ಮರಿ ಟಿಪ್ಪುಗಳನ್ನು ಹುಟ್ಟು ಹಾಕುವಂತೆ ಮಾಡಿದ್ದು ಸಿದ್ದರಾಮಯ್ಯನವರು ಎಂದು ದೂರಿದ್ರು.