ಹುಣಸೂರಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮೈಸೂರಿನ ಎಸ್ಪಿಗೆ ಗೃಹ ಸಚಿವರ ಸಲಹೆಗಾರ ಕೆಂಪಯ್ಯ ಸಲಹೆ ನೀಡಿದರೆ ತಪ್ಪೇನು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಪ್ರತಾಪಸಿಂಹ ಅವರು ರವಿ ಚೆನ್ನಣ್ಣನವರ್ ಅವರನ್ನು ಪೊಲೀಸ್ ಇಲಾಖೆಗೋ ಅಥವಾ ಕೆಂಪಯ್ಯಗೆ ನಿಷ್ಠರೋ ಎಂದು ಮಂಗಳವಾರ ಕೇಳಿದ್ದರು. ಇದಕ್ಕೆ ಉತ್ತರವೆಂಬಂತೆ ಮುಖ್ಯಮಂತ್ರಿ ಮಾಧ್ಯಮಗಳೊಂದಿಗೆ ಮಾತನಾಡಿ, ಎಸ್ಪಿ ರವಿ ಚೆನ್ನಣ್ಣನವರ್ ಜೊತೆಗೆ ಗೃಹ ಸಚಿವರ ಸಲಹೆಗಾರ ಮಾತನಾಡಿದರೆ ತಪ್ಪೇನು ಎಂದು ಕೇಳಿದ್ದಾರೆ.
ಹನುಮ ಜಯಂತಿ ಮೆರವಣಿಗೆಗೆ ಕಳೆದ ವರ್ಷದಂತೆ ಪೊಲೀಸರು ಮಾರ್ಗ ನಿಗದಿ ಮಾಡಿದ್ದರು. ಆದರೆ, ಅದನ್ನು ಬಿಟ್ಟು ಬೇರೆ ಮಾರ್ಗದಲ್ಲಿ ಸಾಗಬೇಕು ಎಂಬ ಪ್ರತಿಷ್ಠೆ ಏಕೆ? ಪೊಲೀಸರ ಕಾನೂನು ಪ್ರಕಾರ ಕಾರ್ಯನಿರ್ವಹಿಸಿದ್ದಾರೆ. ಕೆಂಪಯ್ಯಗೆ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.
ಪ್ರತಾಪಸಿಂಹ ಅವರಿಗೆ ಇನ್ನೂ ರಾಜಕೀಯ ಪ್ರಬುದ್ಧತೆ ಬಂದಿಲ್ಲ. ಸಂಸದನಾಗಿ ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕಾರ ನೀಡುವುದು ಬಿಟ್ಟು ಶಾಂತಿ ಕದಡಬಾರದು ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.