Publish Date: Fri, 18 Nov 2022 (13:41 IST)
Updated Date: Fri, 18 Nov 2022 (14:43 IST)
ಬೆಂಗಳೂರು : ಅಸೆಂಬ್ಲಿ ಚುನಾವಣೆ ಸನಿಹದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಗಂಭೀರ ಆರೋಪವೊಂದನ್ನು ಮಾಡಿದ್ದು, ಇದಕ್ಕೆ ಬಿಜೆಪಿ ಚಿಲುಮೆ ಸಂಸ್ಥೆಗೆ ಮೈತ್ರಿ ಸರ್ಕಾರ ಇದ್ದಾಗಲೇ ಅನುಮತಿ ಕೊಟ್ಟಿದ್ರು ಎಂದು ತಿರುಗೇಟು ನಿಡಿತ್ತು.
ಆದರೆ ಈ ಬಗ್ಗೆ ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಸಿಎಂ ಹಾಗೂ ಕಮಿಷನರ್ ಅನುಮತಿ ಇಲ್ಲದೆ ಮಾಡಲು ಆಗುತ್ತಾ ಎಂದು ಪ್ರಶ್ನಿಸಿದ್ದಾರೆ.
ನಮ್ಮ ಕಾಲದಲ್ಲಿ, ಇವರ ಕಾಲದಲ್ಲಿ ಇತ್ತು ಎಂದು ಕೇಳುತ್ತೀರಲ್ಲಾ, ಒಂದು ಸಂಸ್ಥೆ ದುಡ್ಡು ಇಲ್ಲದೆ ಕೆಲಸ ಮಾಡುತ್ತಿದೆ ಎಂದು ಅವರೇ ಹೇಳಿದ್ದಾರೆ. ಅದಕ್ಕೆ ಜಾಹೀರಾತು ಕೊಡದೇ, ಆ ಸಂಸ್ಥೆ ಅವರಿಗೆ ಕೊಟ್ಟಿದ್ದಾರೆ. ಅವರು ಬಿಎಲ್ ಓಗಳ ಸೋಗಿನಲ್ಲಿ ಕೆಲಸ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
Ramya kosira
Publish Date: Fri, 18 Nov 2022 (13:41 IST)
Updated Date: Fri, 18 Nov 2022 (14:43 IST)