Webdunia - Bharat's app for daily news and videos

Install App

ರಾಜಭವನ ಚಲೋದಲ್ಲಿ ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಚಡ್ಡಿ ದೋಸ್ತು ಕ್ಷಣ

Krishnaveni K
ಶನಿವಾರ, 31 ಆಗಸ್ಟ್ 2024 (14:05 IST)
ಬೆಂಗಳೂರು: ರಾಜ್ಯಪಾಲರ ಪಕ್ಷಪಾತಿ ಧೋರಣೆ ವಿರೋಧಿಸಿ ಇಂದು ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ರಾಜಭವನ ಚಲೋ ಹೋರಾಟ ಹಮ್ಮಿಕೊಂಡಿದ್ದರು.

ಅದರಂತೆ ಕಾಂಗ್ರೆಸ್ ನಾಯಕರು ವಿಧಾನಸಭೆಯ ಗಾಂಧಿ ಪ್ರತಿಮೆಯಿಂದ ರಾಜಭವನದತ್ತ ಕಾಲ್ನಡಿಗೆಯಲ್ಲಿ ತೆರಳಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ದೋಸ್ತಿ ಕ್ಷಣ ಎಲ್ಲರ ಗಮನ ಸೆಳೆಯಿತು. ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ವೇಳೆ ಅಕ್ಕ-ಪಕ್ಕ ಕೂತಿದ್ದ ಈ ಇಬ್ಬರು ನಾಯಕರು ನಗು, ತಮಾಷೆ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು.

ರಾಜಭವನದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ ‘ಬಿಜೆಪ ನಾಯಕರಾದ ಜನಾರ್ಧನ ರೆಡ್ಡಿ, ಯಡಿಯೂರಪ್ಪ, ಜೆಡಿಎಸ್ ನ ಕುಮಾರಸ್ವಾಮಿ ಮೇಲೆ ಸಾಕಷ್ಟು ಪ್ರಕರಣಗಳಿವೆ. ಆ ಪ್ರಕರಣಗಳ ಬಗ್ಗೆ ಮೌನವಾಗಿರುವ ರಾಜ್ಯಪಾಲರು ಈಗ ಸಿದ್ದರಾಮಯ್ಯ ವಿರುದ್ಧ ನಿಯಮ ಉಲ್ಲಂಘಿಸಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದ ಯಾಕೆ? ರಾಜ್ಯಪಾಲರ ಈ ಪಕ್ಷಪಾತಿ ಧೋರಣೆ ವಿರೋಧಿಸಿ ನಾವು ಹೋರಾಟ ನಡೆಸುತ್ತಿದ್ದೇವೆ’ ಎಂದರು.

ರಾಜ್ಯಪಾಲರ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಯುತ್ತಿದ್ದು ಇಂದು ತೀರ್ಪು ಹೊರಬೀಳುವ ನಿರೀಕ್ಷೆಯಿದೆ. ಈ ನಡುವೆ ಕಾಂಗ್ರೆಸ್ ನಾಯಕರು ಇಂದು ರಾಜ್ಯಪಾಲರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments