Publish Date: Sun, 20 Oct 2019 (18:11 IST)
Updated Date: Sun, 20 Oct 2019 (18:12 IST)
ಸಿದ್ದರಾಮಯ್ಯ ಕೀಳುಮಟ್ಟದಲ್ಲಿ ಮಾತನಾಡುವುದನ್ನು ಬಿಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಪ್ರತಿಫಲ ಅನುಭವಿಸುತ್ತಾರೆ. ಹೀಗಂತ ಮಾಜಿ ಸಿಎಂ ಹಾಗೂ ಹಾಲಿ ಸಚಿವರೊಬ್ಬರು ಖಡಕ್ ವಾರ್ನಿಂಗ್ ನೀಡಿದ್ದಾರೆ.
ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸ್ವತಂತ್ರ ಹೋರಾಟಗಾರರು ಹಾಗೂ ಅಪ್ರತಿಮ ವೀರರ ಬಗ್ಗೆ ಕೀಳುಮಟ್ಟದ ಭಾಷೆ ಬಳಸಿದ್ದು ಸರಿಯಲ್ಲ. ಇದರ ಪ್ರತಿಫಲವನ್ನು ಸಿದ್ದರಾಮಯ್ಯ ಅವರು ಅನುಭವಿಸುತ್ತಾರೆ. ಹೀಗಂತ ಸಚಿವ ಜಗದೀಶ್ ಶೆಟ್ಟರ್ ಖಾರವಾಗಿ ಟೀಕೆ ಮಾಡಿದ್ದಾರೆ.
ಸಿದ್ದರಾಮಯ್ಯ ಅವರು ವೀರ ಸಾವರಕರ್ ಬಗ್ಗೆ ಸತ್ಯ ಹೇಳಿದ್ದೇನೆ ಎಂದು ತಿಳಿದಿದ್ದಾರೆ. ಕಾಂಗ್ರೆಸ್ ನವರಿಗೆ ಈ ರೀತಿ ಕೀಳುಮಟ್ಟದ ಭಾಷೆಯಲ್ಲಿ ಮಾತನಾಡುವುದು ರೂಢಿಯಾಗಿದೆ. ಇದು ಸಿದ್ದರಾಮಯ್ಯ ಅವರ ಸಂಸ್ಕೃತಿಯನ್ನು ತೋರಿಸುತ್ತದೆ ಎಂದಿದ್ದಾರೆ.
ಸಿದ್ದರಾಮಯ್ಯಗೆ ಪ್ರತಿಯೊಬ್ಬರ ಬಗ್ಗೆ ಏಕವಚನದಲ್ಲಿ ಮಾತನಾಡುವುದೇ ಅವರ ಸಂಸ್ಕೃತಿಯಾಗಿದೆ ಅಂತ ಟಾಂಗ್ ನೀಡಿದ್ರು.