Publish Date: Sat, 17 Aug 2019 (10:15 IST)
Updated Date: Sat, 17 Aug 2019 (10:18 IST)
ಬೆಂಗಳೂರು : ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಜಾರಿಗೆ ತಂದ ಯೋಜನೆಗಳನ್ನು ಬಿಜೆಪಿ ಸರ್ಕಾರ ರದ್ದು ಮಾಡಬಾರದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸಿಎಂ ಯಡಿಯೂರಪ್ಪಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ನೆರೆಯಿಂದ ತ್ತತರಿಸದ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಸಿಎಂ ಯಡಿಯೂರಪ್ಪಗೆ ಅಧಿಕಾರಿಗಳು ಸಿದ್ದರಾಮಯ್ಯ ಸರ್ಕಾರ ಜಾರಿಗೆ ತಂದ ಯೋಜನೆಗಳನ್ನು ರದ್ದು ಮಾಡುವ ಬಗ್ಗೆ ಸಲಹೆ ನೀಡಿದ್ದಾರೆ.
ಈ ವಿಚಾರ ತಿಳಿದು ಆಕ್ರೋಶಗೊಂಡ ಸಿದ್ದರಾಮಯ್ಯ, 'ನಮ್ಮ ಸರ್ಕಾರ ಜಾರಿಗೆ ತಂದಿದ್ದ ಜನಪರ ಯೋಜನೆಗಳನ್ನು ಈಗಿನ ಸರ್ಕಾರ ರದ್ದುಪಡಿಸುವ, ನಿರ್ಲಕ್ಷಿಸುವ ದುರಾಲೋಚನೆ ಮಾಡಿದರೆ ರಾಜ್ಯದ ಬಡಜನತೆ ದಂಗೆ ಏಳಬಹುದು,ಎಚ್ಚರ ಇರಲಿ. ಇಂತಹ ಜನವಿರೋಧಿ ನಿಲುವುಗಳನ್ನು ನಾವು ಸಹಿಸಿಕೊಳ್ಳುವವರಲ್ಲ, ಹೋರಾಟದ ಮೂಲಕ ಉತ್ತರ ನೀಡಬೇಕಾಗುತ್ತದೆ' ಎಂದು ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.