Publish Date: Sat, 29 Jul 2023 (15:05 IST)
Updated Date: Sat, 29 Jul 2023 (16:42 IST)
ಮಂಡ್ಯ : ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಮಂಡ್ಯಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪರಿಶೀಲನೆ ನಡೆಸಿದರು. ಅಲ್ಲದೇ ಸ್ಪೀಡ್ ಡಿಟೆಕ್ಟರ್ಗೆ ಚಾಲನೆ ನೀಡಿದರು.
ವಾಹನಗಳ ವೇಗವನ್ನ ಸೆರೆಹಿಡಿಯಲು (ಕ್ಯಾಪ್ಚರ್ ಮಾಡಲು) ಹೊಸ ತಂತ್ರಜ್ಞಾನದೊಂದಿಗೆ ಅಳವಡಿಸಲಾಗಿರುವ ಸ್ಪೀಡ್ ಡಿಟೆಕ್ಟರ್ಗೆ ಮಂಡ್ಯ ಹೊರವಲಯದ ಉಮ್ಮಡಹಳ್ಳಿ ಗೇಟ್ ಬಳಿ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಚಲುವರಾಯಸ್ವಾಮಿ, ಶಾಸಕ ಗಣಿಗರವಿ ಸೇರಿದಂತೆ ಹಲವು ಅಧಿಕಾರಿಗಳು ಸಾಥ್ ನೀಡಿದರು.
ಇದಕ್ಕೂ ಮುನ್ನ, ಸಿಎಂ ಆದ ಬಳಿಕ ಮೊದಲ ಬಾರಿಗೆ ಮಂಡ್ಯಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು. ಬೃಹತ್ ಹೂವಿನ ಹಾರ ಹಾಕಿ, ಹೂಗುಚ್ಛ ನೀಡಿ ಅವರನ್ನ ಸ್ವಾಗತಿಸಲಾಯಿತು.