Publish Date: Sat, 04 Jul 2020 (17:08 IST)
Updated Date: Sat, 04 Jul 2020 (17:10 IST)
ಹಳ್ಳಿಹಕ್ಕಿ, ಮಾಜಿ ಸಚಿವ ಹೆಚ್. ವಿಶ್ವನಾಥ್ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಲಡಾಖ್ ಗೆ ಭೇಟಿ ನೀಡಿದ್ದು ಸರಿಯಾಗಿದೆ. ಆದರೆ ಸಿದ್ದರಾಮಯ್ಯ ವಿನಾಕಾರಣ ಆರೋಪ ಮಾಡುತ್ತಿದ್ದಾರೆ ಎಂದರು.
ಕಾಂಗ್ರೆಸ್ ಗೆ ಸಿದ್ದರಾಮಯ್ಯರನ್ನು ನಾನೇ ಕರೆತಂದಿದ್ದೇನೆ. ಅವರು ಸಿಎಂ ಆಗಿದ್ದು ನನಗೆ ಖುಷಿ ಇದೆ. ಆದರೆ ಸಿದ್ದರಾಮಯ್ಯ ಮಾತ್ರ ಎಲ್ಲರನ್ನೂ ತುಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ವಿಶ್ವನಾಥ್ ದೂರಿದ್ದಾರೆ.
ಪ್ರಧಾನಿ ವಿರುದ್ಧ ಆಧಾರರಹಿತ ಆರೋಪ ಮಾಡುತ್ತಿರುವುದನ್ನು ಕಾಂಗ್ರೆಸ್ ನಾಯಕರು ಕೈಬಿಡಬೇಕು ಎಂದು ವಿಶ್ವನಾಥ್ ಆಗ್ರಹ ಮಾಡಿದ್ದಾರೆ.