ಆಗ ಮಧ್ಯಪ್ರವೇಶ ಮಾಡಿದ ಸ್ಪೀಕರ್, ರಮೇಶ್ ಕುಮಾರ್ಗೆ ಟಾಂಗ್ ಕೊಟ್ಟರು.
ಸಸ್ಪೆಂಡ್ ಮಾಡಿ ಅಂತಾ ರಮೇಶ್ ಕುಮಾರ್ ಸಲಹೆ ಕೊಟ್ಟಿದ್ದಾರೆ. ಸಸ್ಪೆಂಡ್ ಮಾಡಿ ಅಂತ ರಮೇಶ್ ಕುಮಾರ್ ಬರೆದು ಕೊಡಲಿ. ಸಿದ್ದರಾಮಯ್ಯ ಹಿರಿಯರಿದ್ದಾರೆ, ಅನುಭವಿಗಳಿದ್ದಾರೆ. ಅಂತಹವರನ್ನು ಸಸ್ಪೆಂಡ್ ಮಾಡಿ ಅಂತ ರಮೇಶ್ ಕುಮಾರ್ ಸಲಹೆ ಕೊಡ್ತಿದ್ದಾರೆ ಅಂತಾ ತಿರುಗೇಟು ನೀಡಿದರು.
ಬಳಿಕವೂ ಗದ್ದಲ ಮುಂದುವರಿದಾಗ ವಿಧಾನಸಭೆ ಕಲಾಪವನ್ನು ಸೋಮವಾರ ಬೆಳಗ್ಗೆ 11ಕ್ಕೆ ಮುಂದೂಡಲಾಯಿತು. ಕಾಂಗ್ರೆಸ್ ನಾಯಕರು ಅಹೋರಾತ್ರಿ ಧರಣಿಯನ್ನು ಮುಂದುವರಿಸಿದ್ದಾರೆ.
ಸೋಮವಾರದವರೆಗೂ ಧರಣಿ ಮಾಡೋಣ, ಯಾರೂ ಹೋಗಬೇಡಿ, ಇಲ್ಲೇ ಕೂರಿ. ರಾತ್ರಿ ವಿಧಾನಸಭೆಯಲ್ಲಿ ಮಲಗೋಣ ಎಂದು ಸಿದ್ದರಾಮಯ್ಯ ಕಾಂಗ್ರೆಸ್ ಸದಸ್ಯರಿಗೆ ಖಡಕ್ ಸೂಚನೆ ಕೊಟ್ಟಿದ್ದು, ಧರಣಿ ಮುಂದುವರಿದಿದೆ.