ಬೆಂಗಳೂರು : ದೋಸ್ತಿ ಸರ್ಕಾರ ಉಳಿಸಿಕೊಳ್ಳಲು ಸಿದ್ದರಾಮಯ್ಯ ಹಾಗೂ ಸಿಎಂ ಕುಮಾರಸ್ವಾಮಿ ರಣತಂತ್ರ ರೂಪಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಅತೃಪ್ತ ಶಾಸಕರ ಮನವೊಲಿಸುವ ಸಲುವಾಗಿ ಅವರುಗಳಿಗೆ ಸಚಿವ ಸಂಪುಟದಲ್ಲಿ ಅವಕಾಶ ಕಲ್ಪಿಸಿಕೊಡಲು ಮುಂದಾಗಿದ್ದಾರೆ. ಬುಧವಾರದಂದು ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಹೇಳಲಾಗಿದ್ದು, ಮೊದಲ ಹಂತದಲ್ಲಿ ಬಿ.ಸಿ. ಪಾಟೀಲ್, ಡಾ. ಕೆ. ಸುಧಾಕರ್, ರೋಷನ್ ಬೇಗ್ ಹಾಗೂ ಮಹೇಶ್ ಕುಮಟಳ್ಳಿ ಅವರಿಗೆ ಸಚಿವ ಸ್ಥಾನ ನೀಡಲಾಗುತ್ತದೆ ಎಂದು ಹೇಳಲಾಗಿದೆ.
ಪಕ್ಷದ ಬಿಡದವರಿಗೆ ಸಚಿವ ಸ್ಥಾನ ನೀಡದಿರಲು ನಿರ್ಧಾರ ಮಾಡಿದ್ದಾರೆ. ಮುಂದಿನ ಹಂತದಲ್ಲಿ ಹಾಲಿ ಕಾರ್ಯ ನಿರ್ವಹಿಸುತ್ತಿರುವ ನಾಲ್ಕರಿಂದ ಐದು ಸಚಿವರಿಗೆ ಕೊಕ್ ಕೊಟ್ಟು ಅತೃಪ್ತ ಶಾಸಕರಿಗೆ ಸಚಿವ ಸ್ಥಾನ ನೀಡಲು ಚರ್ಚಿ ನಡೆಸಲಾಗಿದೆ ಎನ್ನಲಾಗಿದೆ. ಜೊತೆಗೆ ನಿಗಮ-ಮಂಡಳಿಗಳಿಗೂ ಶಾಸಕರನ್ನು ನೇಮಕ ಮಾಡುವ ಮೂಲಕ ಭಿನ್ನಮತ ಶಮನಕ್ಕೆ ದೋಸ್ತಿ ನಾಯಕರು ಮುಂದಾಗಿದ್ದಾರೆ ಎನ್ನಲಾಗಿದೆ.