ಬೆಂಗಳೂರು: ಮುಡಾ ಹಗರಣದಲ್ಲಿಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಯಾದರೂ ಅವರು ದೆಹಲಿ ಸಿಎಂ ಆಗಿದ್ದ ಅರವಿಂದ್ ಕೇಜ್ರಿವಾಲ್ ಮಾಡೆಲ್ ಫಾಲೋ ಮಾಡಲಿದ್ದಾರಂತೆ. ಈ ಬಗ್ಗೆ ಸತೀಶ್ ಜಾರಕಿಹೊಳಿ ಸುಳಿವು ನೀಡಿದ್ದಾರೆ.
ಸಿಎಂ ವಿರುದ್ಧ ಕೇಸ್ ದಾಖಲಿಸಿ, ಅವರನ್ನು ಬಂಧಿಸಬೇಕಾದ ಪರಿಸ್ಥಿತಿ ಬಂದರೂ ಅವರು ರಾಜೀನಾಮೆ ನೀಡುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ. ಅಂತಹ ಸಂದರ್ಭ ಬಂದಾಗ ಸಿದ್ದರಾಮಯ್ಯ ಕೂಡಾ ಕೇಜ್ರಿವಾಲ್ ರೀತಿ ಮಾಡ್ತಾರಾ ಎಂದು ಪತ್ರಕರ್ತರು ಸತೀಶ್ ಜಾರಕಿಹೊಳಿಗೆ ಪ್ರಶ್ನಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಅವರು ಕೇಜ್ರಿವಾಲ್ ಮಾಡೆಲ್ ಫಾಲೋ ಮಾಡಬಹುದೇನೋ. ಅದರ ಬಗ್ಗೆ ಏನೂ ಗೊತ್ತಿಲ್ಲ. ಸದ್ಯಕ್ಕೆ ರಾಜೀನಾಮೆ ಪ್ರಶ್ನೆ ಎಲ್ಲಾ ಬರಲ್ಲ. ಇನ್ನೂ ಎಫ್ ಐಆರ್ ದಾಖಲಾಗಬೇಕು, ತನಿಖೆಯಾಗಬೇಕು, ಈಗಲೇ ಏನೂ ಹೇಳಕ್ಕಾಗಲ್ಲ ಎಂದಿದ್ದಾರೆ.
ಈ ಮೊದಲು ಕಾಂಗ್ರೆಸ್ ನಲ್ಲಿ ಸಿಎಂ ಬದಲಾವಣೆ ಬಗ್ಗೆ ಒಳಗೊಳಗೇ ಕಾಂಗ್ರೆಸ್ ನಾಯಕರು ಪ್ರಯತ್ನ ನಡೆಸುತ್ತಿದ್ದಾಗ ಸತೀಶ್ ಜಾರಕಿಹೊಳಿ ಇದರ ನೇತೃತ್ವ ವಹಿಸಿದ್ದರು ಎಂಬ ಸುದ್ದಿ ಕೇಳಿಬಂದಿತ್ತು. ಇದೀಗ ಅವರು ಸಿದ್ದರಾಮಯ್ಯನವರ ಬಗ್ಗೆ ನೀಡಿರುವ ಹೇಳಿಕೆ ಮಹತ್ವದ್ದಾಗಿದೆ.