Publish Date: Wed, 26 Apr 2023 (14:39 IST)
Updated Date: Wed, 26 Apr 2023 (14:30 IST)
ಬೆಳಗಾವಿ : ಬೆಳಗಾವಿ ವಿಮಾನ ನಿಲ್ದಾಣವು ಬುಧವಾರ ಅಪರೂಪದ ರಾಜಕೀಯ ಸನ್ನಿವೇಶವೊಂದಕ್ಕೆ ಸಾಕ್ಷಿಯಾಯಿತು. ರಾಜ್ಯದ ಮಾಜಿ ಸಿಎಂ ಹಾಗೂ ಹಾಲಿ ಸಿಎಂಗಳಿಬ್ಬರು ಪರಸ್ಪರ ಭೇಟಿಯಾಗಿ ಕುಶಲೋಪರಿ ವಿಚಾರಿಸಿದರು.
ಅವರು ಬೇರ್ಯಾರೂ ಅಲ್ಲ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಈ ಇಬ್ಬರೂ ನಾಯಕರು ಆಕಸ್ಮಿಕವಾಗಿ ಭೇಟಿಯಾದರು. ಈ ವೇಳೆ ಬಸವರಾಜ ಬೊಮ್ಮಾಯಿ ಅವರು ಸಿದ್ದರಾಮಯ್ಯ ಅವರ ಕೈ ಕುಲುಕಿ ಕುಶಲೋಪರಿ ವಿಚಾರಿಸಿದರು. ಇಬ್ಬರೂ ಕೆಲ ಹೊತ್ತು ಮಾತನಾಡಿದರು.
ಈ ವೇಳೆ ಸಿದ್ದರಾಮಯ್ಯ ಅವರು ನಗುತ್ತಲೇ ಸಲುಗೆಯಿಂದ ಬೊಮ್ಮಾಯಿ ಅವರ ಬೆನ್ನು ತಟ್ಟಿದರು. ನಂತರ ಇಬ್ಬರೂ ಒಟ್ಟಿಗೆ ಸ್ವಲ್ಪ ದೂರು ಸಾಗಿದರು. ನಾಯಕರಲ್ಲಿ ರಾಜಕೀಯ ಹಾಗೂ ಸೈದ್ಧಾಂತಿಕವಾಗಿ ಭಿನ್ನಾಭಿಪ್ರಾಯ ಸಹಜ.