ಬಿಜೆಪಿ ಕಾರ್ಯಕರ್ತ ದೀಪಕ್ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಕ್ಷಣೆ ನೀಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.
ದಾವಣಗೆರೆ ಜಿಲ್ಲೆಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಮುಖ್ಯಮಂತ್ರಿ ಅವರು ಕೊಲೆಗಡುಕರಿಗೆ ರಕ್ಷಣೆ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನಲ್ಲಿ ಕೊಲೆಯಾದ ದೀಪಕ್ ಅವರ ಶವಯಾತ್ರೆಗೆ ಅವಕಾಶ ನೀಡದ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಯಡಿಯೂರಪ್ಪ ಅವರು ಪಿಎಫ್‌ಐ ಸಂಘಟನೆಯನ್ನು ನಿಷೇಧ ಮಾಡದೆ. ಅವರ ಮೇಲಿನ ಪ್ರಕರಣಗಳನ್ನು ರದ್ದು ಮಾಡಿಕೊಂಡು ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಚುನಾವಣೆಗೆ ರಹಸ್ಯ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಟೀಕೆ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.