Publish Date: Wed, 27 May 2026 (12:44 IST)
Updated Date: Wed, 27 May 2026 (12:48 IST)
ಬೆಂಗಳೂರು: ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೀರಾ ಎಂದು ಮಾಧ್ಯಮಗಳು ಇಂದು ಪ್ರಶ್ನೆ ಮಾಡಿದಾಗ ಸಿದ್ದರಾಮಯ್ಯನವರು ನೀಡಿದ ಪ್ರತಿಕ್ರಿಯೆ ಅಚ್ಚರಿ ಹುಟ್ಟಿಸುವಂತಿದೆ.
ನಿನ್ನೆ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜೊತೆ ಸುದೀರ್ಘ ಮಾತುಕತೆ ನಡೆಸಿದ ನಂತರ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ದಟ್ಟವಾಗಿದೆ. ಇದರ ನಡುವೆ ಇಂದು ಅವರು ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ.
ಸಿಎಂ ಬದಲಾವಣೆ ವಿಚಾರ ಸುದ್ದಿಯಲ್ಲಿರುವಾಗಲೇ ಇಂದು ಜವಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ. ಈ ವೇಳೆ ಮಾಧ್ಯಮಗಳು ಅವರನ್ನು ಸುತ್ತುವರೆದಿದ್ದು ರಾಜೀನಾಮೆ ನೀಡ್ತೀರಾ ಸಾರ್ ಎಂದು ಪ್ರಶ್ನೆ ಮಾಡಿವೆ.
ಇದಕ್ಕೆ ಉತ್ತರಿಸಿರುವ ಅವರು ಎಲ್ಲದಕ್ಕೂ ನಾಳೆ ಉತ್ತರ ನೀಡುತ್ತೇನೆ. ದೆಹಲಿಗೆ ಹೋಗಿದ್ದ ವಿಚಾರದ ಬಗ್ಗೆ ನಾಳೆ ಮುಕ್ತವಾಗಿ ಮಾತನಾಡುತ್ತೇನೆ ಎಂದಿದ್ದಾರೆ. ಅವರ ಈ ಹೇಳಿಕೆ ಅಚ್ಚರಿ ಹುಟ್ಟಿಸಿದೆ. ವಿಶೇಷವೆಂದರೆ ಇದುವರೆಗೆ ಇಂಥಾ ಪ್ರಶ್ನೆ ಕೇಳಿದಾಗ ಅವರು ನಾನು ರಾಜೀನಾಮೆ ನೀಡಲ್ಲ ಎಂದೇ ಹೇಳುತ್ತಿದ್ದರು. ಆದರೆ ಈ ಬಾರಿ ಎಲ್ಲಾ ನಾಳೆ ಹೇಳುವುದಾಗಿ ಹೇಳಿರುವುದು ಕುತೂಹಲ ಹೆಚ್ಚಿಸಿದೆ. ಹೀಗಾಗಿ ನಾಳೆ ಸಿದ್ದರಾಮಯ್ಯನವರ ರಾಜಕೀಯ ಭವಿಷ್ಯ ತೀರ್ಮಾನವಾಗುವುದು ಖಚಿತವಾಗಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ