Publish Date: Fri, 29 May 2026 (19:34 IST)
Updated Date: Fri, 29 May 2026 (19:38 IST)
ಚಿಕ್ಕಬಳ್ಳಾಪುರ: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ಅವರು ರಾಜ್ಯ ರಾಜಕಾರಣದಲ್ಲಿ ಇರುವುದಾಗಿ ಹೇಳಿರುವುದು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ ಎಂದು ಸಂಸದ ಡಿಕೆ ಸುಧಾಕರ್ ಹೇಳಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಸಿದ್ದರಾಮಯ್ಯ ಅವರ ಅನುಪಸ್ಥಿತಿ ಖಂಡಿತವಾಗಿ ಕಾಣಲಿದೆ. ನಮ್ಮ ನಡುವೆ ಏನೇ ಭಿನ್ನಾಭಿಪ್ರಾಯಗಳು ಇದ್ದರೂ ಅವರು ಸಾಮಾಜಿಕ ನ್ಯಾಯ, ಸಮಾನತೆ, ಸಾಮಾನ್ಯ ಜನರಿಗೆ ಉತ್ತಮ ಕಾರ್ಯಕ್ರಮ ನೀಡಿದ್ದಾರೆ ಎಂದು ಹೇಳಿದರು.
ಸಿದ್ದರಾಮಯ್ಯ ಅವರು ಸುಮ್ಮನೆ ಕೂರುವವರಲ್ಲ. ಭಿನ್ನಾಭಿಪ್ರಾಯ ಹೊಂದಿರುವ ಶಾಸಕರು ಅಭಿಯಾನ ಮಾಡಿದರೆ ಅದರ ಕೇಂದ್ರವಾಗಿ ಸಿದ್ದರಾಮಯ್ಯರಾಗಿರುತ್ತಾರೆ ಎಂದು ಭವಿಷ್ಯ ನುಡಿದರು.
ಡಿ.ಕೆ.ಶಿವಕುಮಾರ್ ಅವರು ಹೋರಾಟ, ಸಂಘಟನೆ ಮಾಡಿದ್ದಾರೆ. ಈಗ ಮುಖ್ಯಮಂತ್ರಿ ಸ್ಥಾನ ದಕ್ಕಿಸಿಕೊಳ್ಳುತ್ತಿದ್ದಾರೆ. ರಿಯಲ್ ಎಸ್ಟೇಟ್ ಎನ್ನುವುದು ಕಳ್ಳತನ ಅಥವಾ ದರೋಡೆಯಲ್ಲ. ಅನ್ಯಾಯ ಮಾಡದೆ ಆ ವೃತ್ತಿ ಮಾಡಬೇಕು. ಡಿ.ಕೆ.ಶಿವಕುಮಾರ್ ಅವರೊಬ್ಬರೇ ಅಲ್ಲ ಅನೇಕರು ಆ ವೃತ್ತಿ ಮಾಡುತ್ತಿದ್ದಾರೆ. ಹಾಗಾಗಿ ಆ ವಿಚಾರದಲ್ಲಿ ಯಾರೂ ಟೀಕೆ ಮಾಡಬಾರದು ಎಂದು ಹೇಳಿದರು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ