Publish Date: Thu, 16 May 2019 (15:56 IST)
Updated Date: Thu, 16 May 2019 (15:58 IST)
ಮಾಜಿ ಸಿಎಂ ಹಾಗೂ ಮೈತ್ರಿ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದಾಮಯ್ಯನವರ ಬೆಂಬಲಿಗರು ಕಾಲೆಳೆದು ಜಗಳ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ದೂರಿದ್ದಾರೆ.
ರಾಜಕೀಯ ಬದಲಾವಣೆ ಆಗಬೇಕು. ಕಚ್ಚಾಟ ನಿಲ್ಲಬೇಕು ಅಂತಾ ಮತದಾರರು ಹೇಳುತ್ತಿದ್ದಾರೆ. ವೀರಶೈವ ಲಿಂಗಾಯತ ಸಮಾಜದ ಮತ ಕೇಳುವ ಹಕ್ಕಿಲ್ಲ. ಜೆಡಿಎಸ್‌ನವರು ನಮ್ಮ ಸಂಪರ್ಕದಲ್ಲಿ ಇಲ್ಲ. ಸಿದ್ದರಾಮಯ್ಯ ಪ್ರಧಾನಿಗಳ ಬಗ್ಗೆ ಹಗುರವಾಗಿ ಮಾತನಾಡುತ್ತಿರುವುದು ಖಂಡನೀಯ ಅಂತ ಹುಬ್ಬಳ್ಳಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
ಕುಂದಗೋಳ ಮತ್ತು ಚಿಂಚೋಳಿಯಲ್ಲಿ ಗೆದ್ದರೆ ದೊಡ್ಡ ರಾಜಕೀಯ ಬದಲಾವಣೆ ಆಗುತ್ತೆ ಅಂತಾ ಹೇಳುತ್ತಿದ್ದೇನೆ.
ವಿರೋಧ ಪಕ್ಷದಲ್ಲಿ ಇದ್ದು ಕೆಲಸ ಮಾಡಲು ಸಿದ್ಧನಿದ್ದೇನೆ. ಸಿದ್ದರಾಮಯ್ಯ ಬೆಂಬಲಿಗರು ಕಾಲುಕೆರೆದು ಜಗಳ ಮಾಡುತ್ತಿದ್ದಾರೆ ಎಂದು ದೂರಿದ್ರು.
ಇನ್ನು ಮಲ್ಲಿಕಾರ್ಜುನ ಖರ್ಗೆಯನ್ನು ಸಿಎಮ್ ಮಾಡುವ ವಿಚಾರ ಕುರಿತು ಮಾತನಾಡಿ, ಕುಮಾರಸ್ವಾಮಿಯವರು ಹೇಳಿದ್ದನ್ನೇ ನಾನು ಹೇಳಿದ್ದೇನೆ ಎಂದರು.