ರಾಹುಲ್​​​​ ಪರ ಸಿದ್ದರಾಮಯ್ಯ ಟ್ವೀಟ್

Webdunia
ಸೋಮವಾರ, 20 ಮಾರ್ಚ್ 2023 (17:30 IST)
ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್ ಜೋಡೊ ಯಾತ್ರೆಯ ಯಶಸ್ಸು ಆಡಳಿತಾರೂಢ BJP ನಿದ್ದೆಗೆಡಿಸಿದೆ ಎಂದು ವಿಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಲೈಂಗಿಕ ದೌರ್ಜನ್ಯದ ಕುರಿತಾಗಿ ಮಹಿಳೆಯರ ಹೇಳಿಕೆಯ ಬಗ್ಗೆ ಮಾಹಿತಿ ಸಂಗ್ರಹ ಮಾಡಲು ರಾಹುಲ್ ಗಾಂಧಿ ನಿವಾಸಕ್ಕೆ ಪೊಲೀಸರು ತೆರಳಿರುವ ವಿಚಾರವಾಗಿ BJP ಹಾಗೂ ಕಾಂಗ್ರೆಸ್ ನಡುವೆ ವಾಗ್ದಾಳಿ ನಡೆಯುತ್ತಿರುವ ಬೆನ್ನಲ್ಲೇ ಸಿದ್ದರಾಮಯ್ಯ ಟ್ವೀಟ್ ಮಾಡಿ ರಾಹುಲ್ ಪರವಾಗಿ ಧ್ವನಿ ಎತ್ತಿದ್ದಾರೆ. ಮಹಿಳಾ ಪೀಡಕರ ಕೂಟಕ್ಕೆ ಮಹಿಳಾ ರಕ್ಷಕರೇ ಅಪರಾಧಿಗಳಾಗಿ ಕಾಣುತ್ತಾರೆ ಎನ್ನುವುದಕ್ಕೆ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರಿಗೆ ನರೇಂದ್ರ ಮೋದಿ ಸರ್ಕಾರ ಪೊಲೀಸರ ಮೂಲಕ ನೀಡುತ್ತಿರುವ ಕಿರುಕುಳವೇ ಸಾಕ್ಷಿ ಎಂದು ಕಿಡಿಕಾರಿದ್ದಾರೆ. ಭಾರತ್ ಜೋಡೊ ಯಾತ್ರೆಯ ಯಶಸ್ಸು ಆಡಳಿತಾರೂಢ BJP ಪಕ್ಷದ ನಿದ್ದೆಗೆಡಿಸಿದೆ. ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರ ಜನಪ್ರಿಯತೆ ಅವರಲ್ಲಿ ಅಸೂಯೆ ಹುಟ್ಟಿಸಿದೆ. ಇವರಿಗೆಲ್ಲ ನನ್ನ ಸಂತಾಪಗಳು. ರಾಹುಲ್ ಗಾಂಧಿಯವರ ಹೋರಾಟ ನಿಲ್ಲದು, ಇಡೀ ದೇಶ ಅವರ ಜೊತೆಗಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಕಳೆದ ವರ್ಷ ಲಂಡನ್‌ನ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾದ ಸೌದಿ ಯುವರಾಜಕುಮಾರನ ಸಾವಿಗೆ ಕಾರಣ ಏನ್ ಗೊತ್ತಾ

ವಿದ್ಯಾರ್ಥಿಗಳ ಮೇಲೆ ಪೊಲೀಸರ ಅತಿಯಾದ ಬಲಪ್ರಯೋಗ, ಜು.27ರಂದು ವಿಚಾರಣೆಗೆ ಸುಪ್ರೀಂ ಅಸ್ತು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ ಕಾದಿದೆ, ಏನ್ ವಿಷಯ ಗೊತ್ತಾ

ಮುಂದಿನ ಸುದ್ದಿ