ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಸೋತಿದ್ದರಿಂದ ಉಪಚುನಾವಣೆಯಲ್ಲಿ ಬಿಜೆಪಿ ಸೋಲು ನಿಶ್ಚಿತ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.
ಪ್ರಧಾನಿ ಮೋದಿ ಅವರ ಆಡಳಿತ ವೈಫಲ್ಯದಿಂದ ಜನರು ರೋಸಿ ಹೋಗಿದ್ದಾರೆ. ಹೀಗಾಗಿ ಈ ಬಾರಿಯ ಉಪ ಚುನಾವಣೆ ಹಾಗೂ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸೋಲು ಖಚಿತವಾಗಲಿದೆ ಎಂದರು.
ದೇಶದ ಆರ್ಥಿಕತೆ ಕುಸಿದಿದೆ. ವಿದೇಶಿ ವಿನಿಮಯದಲ್ಲಿ ಆಮದು ಹೆಚ್ಚಾಗಿ ರಫ್ತು ಕಡಿಮೆ ಇರಬೇಕು. ಆಗ ದೇಶದ ಆರ್ಥಿಕತೆಗೆ ಸದೃಢ ಬಲ ಬರುತ್ತದೆ ಎಂದರು.
ಪೆಟ್ರೋಲ್, ಡೀಸೇಲ್ ದರ ಏರಿಕೆ ಕಾಣಲು ಕೇಂದ್ರ ಸರಕಾರ ಕಾರಣವಾಗಿದೆ. ಚುನಾವಣೆಯಲ್ಲಿ ಜನರು ಬಿಜೆಪಿಗೆ ಪಾಠ ಕಲಿಸಲಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.