Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಸಂಪುಟ ವಿಸ್ತರಣೆ ಬಗ್ಗೆ ಸಮನ್ವಯ ಸಮಿತಿಯಲ್ಲಿ ತೀರ್ಮಾನ ಮಾಡ್ತೀವಿ ಎಂದ ಸಿದ್ದರಾಮಯ್ಯ

ಸಂಪುಟ ವಿಸ್ತರಣೆ ಬಗ್ಗೆ ಸಮನ್ವಯ ಸಮಿತಿಯಲ್ಲಿ ತೀರ್ಮಾನ ಮಾಡ್ತೀವಿ ಎಂದ ಸಿದ್ದರಾಮಯ್ಯ
ಹುಬ್ಬಳ್ಳಿ , ಭಾನುವಾರ, 2 ಡಿಸೆಂಬರ್ 2018 (16:49 IST)
ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರಕಾರದ ಚಳಿಗಾಲದ ವಿಧಾನಮಂಡಲದ ಅಧಿವೇಶನಕ್ಕೆ ಮೊದಲು ಸಚಿವ ಸಂಪುಟ ವಿಸ್ತರಣೆ ಮಾಡಬೇಕೆಂಬ ಉದ್ದೇಶವಿದೆ. ಸಮನ್ವಯ ಸಮಿತಿ ಸಭೆಯಲ್ಲಿ ಬಗ್ಗೆ ಸಮಗ್ರವಾಗಿ ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು ಎಂದು ಮಾಜಿ ಸಿಎಂ ಹಾಗೂ  ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.

ಡಿಸೆಂಬರ್ 5 ರಂದು ನಡೆಯಲಿರುವ ಸಮನ್ವಯ ಸಮಿತಿ ಸಭೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

 ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಂಪುಟ ವಿಸ್ತರಣೆಗೆ ಕುರಿತಂತೆ ನಮ್ಮ ಶಾಸಕರೂ  ಅವಸರ ಮಾಡುತ್ತಿಲ್ಲ ಎಂದರು. ಸಚಿವ ಸಂಪುಟ ವಿಸ್ತರಣೆ ಆದ ದಿನವೇ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಬಿಜೆಪಿಗೆ ಜನರು ಬಹುಮತ ನೀಡಿಲ್ಲ. ಮುಖ್ಯಮಂತ್ರಿಯಾಗಬೇಕೆಂಬ ಯಡಿಯೂರಪ್ಪ, ಈಶ್ವರಪ್ಪನವರ ಕನಸು ಎಂದಿಗೂ ನನಸಾಗದು ಎಂದರು.
ಸಮ್ಮಿಶ್ರ ಸರ್ಕಾರ ಸುಭದ್ರವಾಗಿದ್ದು, 5 ವರ್ಷಗಳ ಅವಧಿಯನ್ನು ಪೂರೈಸಲಿದೆ. ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್ ಶಾಸಕರ ಹಿತ ಕಡೆಗಣಿಸಲಾಗಿದೆ ಎಂದು ತಮ್ಮ ವಿರುದ್ಧ ಯಾರೂ ಸಹ ಹೈಕಮಾಂಡ್ಗೆ ದೂರು ನೀಡಿಲ್ಲ, ಅದೆಲ್ಲ ಕೇವಲ ಊಹಾಪೋಹ, ಸತ್ಯಕ್ಕೆ ದೂರವಾದುದು ಎಂದು ಸಿದ್ಧರಾಮಯ್ಯ ಹೇಳಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಯಾವ ಕಾರಣವಿಲ್ಲದೇ ಹೆಣವಾದ ಇಬ್ಬರು ಮಹಿಳೆಯರು: ಯಾಕೆ ಗೊತ್ತಾ?