Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಬರ ಪರಿಹಾರ ನೀಡದೆ ಸುಳ್ಳು ಹೇಳಿದ ಅಮಿತ್ ಶಾ: ಸಿದ್ದರಾಮಯ್ಯ

Siddaramaiah

Krishnaveni K

ಮೈಸೂರು , ಬುಧವಾರ, 3 ಏಪ್ರಿಲ್ 2024 (15:22 IST)
ಮೈಸೂರು: ರಾಜ್ಯದ ಜನ ಬರಗಾಲದಿಂದ ತತ್ತರಿಸಿದ್ದರೂ ಸ್ಪಂದಿಸದ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
 
ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಬರ ಘೋಷಣೆ ಆದ ಬಳಿಕ ನಾವು ಸೆಪ್ಟೆಂಬರ್ 23ರಂದೇ ಕೇಂದ್ರಕ್ಕೆ ಮೊದಲ ಮನವಿ ಮಾಡಿದ್ದೇವೆ. ಅಕ್ಟೋಬರ್ ನಲ್ಲಿ ಕೇಂದ್ರ ತಂಡ ರಾಜ್ಯ ಪ್ರವಾಸ ಮಾಡಿ ಬರ ಕುರಿತಂತೆ ವರದಿ ನೀಡಿದೆ. ಈ ತಿಂಗಳಲ್ಲಿಯೇ ಮೂರು ಮನವಿಗಳನ್ನು ಸಲ್ಲಿಸಿದ್ದೇವೆ. ನಂತರ ಡಿಸೆಂಬರ್ 19ರಂದು ನಾನು ಖುದ್ದು ಪ್ರಧಾನ ಮಂತ್ರಿಗಳನ್ನು ಹಾಗೂ 20ರಂದು ಅಮಿತ್ ಶಾ ಅವರನ್ನು ಭೇಟಿಯಾಗಿ, ರಾಜ್ಯದ ಬರ ಪರಿಸ್ಥಿತಿಯ ವಸ್ತುಸ್ಥಿತಿಯನ್ನು ತಿಳಿಸಿದ್ದೇನೆ. ಡಿಸೆಂಬರ್  23ಕ್ಕೆ  ಉನ್ನತ ಮಟ್ಟದ ಸಮಿತಿ ಸಭೆ ನಡೆಸುವುದಾಗಿ ಅಮಿತ್ ಶಾ ಅವರು ತಿಳಿಸಿದ್ದರು. ಮನವಿ ಸಲ್ಲಿಸಿ ಐದು ತಿಂಗಳು ಕಳೆದಿದ್ದರೂ ಅವತ್ತಿಂದ, ಇವತ್ತಿನವರೆಗೂ ಕೇಂದ್ರ ಸರ್ಕಾರ ರಾಜ್ಯಕ್ಕೆ  ಬರ ಪರಿಹಾರವನ್ನು ನೀಡದ ಇವರಿಗೆ ಯಾವ ನೈತಿಕತೆ ಇದೆ. ದೇಶದ ಗೃಹ ಸಚಿವರಾದ ಅಮಿತ್  ಶಾ ಸತ್ಯವನ್ನೂ ನಾಚಿಸುವಂತೆ ಅಪ್ಪಟ ಸುಳ್ಳು ಹೇಳಿದ್ದಾರೆ. ಈ ಎಲ್ಲ ಅಂಶಗಳನ್ನು ಸೂಕ್ತ ದಾಖಲಾತಿ ಗಳೊಂದಿಗೆ ನಿರೂಪಿಸಲು ಸಿದ್ಧವಿದ್ದು, ಕೇಂದ್ರದ ಈ ಧೋರಣೆಯನ್ನು ಪ್ರಶ್ನಿಸಿ, ನ್ಯಾಯಾಲಯದ ಕದವನ್ನೂ ತಟ್ಟಲಾಗಿದೆ ಎಂದರು.
 
ದೇಶದ ವಿವಿಧೆಡೆಗಳಲ್ಲಿ ಸಂಭವಿಸುವ ಪ್ರಕೃತಿ ವಿಕೋಪಗಳಿಗೆ ಪರಿಹಾರ ನೀಡಲೆಂದು 15ನೇ ಹಣಕಾಸು ಆಯೋಗದಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯನ್ನು  ಕೇಂದ್ರಕ್ಕೆ ನೀಡಲಾಗಿರುತ್ತದೆ. ಎನ್ ಡಿ ಆರ್ ಎಫ್ ಹಣ ರಾಜ್ಯಗಳಿಗೆ ಸೇರಿದ್ದು. ರಾಜ್ಯದ ಜನ ಬರಗಾಲದಿಂದ ತತ್ತರಿಸಿದ್ದರೂ ಸ್ಪಂದಿಸದ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸಬೇಕು ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಇಷ್ಟರವರೆಗೆ ಮೋದಿ ತೋರಿಸಿದ್ದು ಕೇವಲ ಟ್ರೈಲರ್: ಬಸನಗೌಡ ಪಾಟೀಲ್ ಯತ್ನಾಳ್