Publish Date: Sat, 19 Jan 2019 (20:59 IST)
Updated Date: Sat, 19 Jan 2019 (21:01 IST)
ರಾಜ್ಯದ ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನು ಬಿಜೆಪಿ ಮಾಡುವುದಿಲ್ಲ ಎಂಬ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರನ್ನು ಹೇಳಿಕೆಯನ್ನು ಮಾಜಿ ಸಿಎಂ ಸ್ವಾಗತ ಮಾಡಿದ್ದಾರೆ.
ಯಡಿಯೂರಪ್ಪನವರು ನುಡಿದಂತೆ ನಡೆಯಲಿ ಎಂದ ಸಿದ್ದರಾಮಯ್ಯ ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ನಿರ್ಧಾರನ್ನು ಟ್ವೀಟ್ ಮಾಡುವ ಮೂಲಕ ಸ್ವಾಗತಿಸಿರುವ ಸಿದ್ದರಾಮಯ್ಯ, ಯಡಿಯೂರಪ್ಪ ನುಡಿದಂತೆ ನಡೆದು, ರಾಜ್ಯದ ಜನತೆಯ ನಂಬಿಕೆ ಉಳಿಸಿಕೊಳ್ಳಲಿ ಎಂದರು. ದೆಹಲಿಯಲ್ಲಿರುವ ಬಿಜೆಪಿ ಶಾಸಕರನ್ನು ರಾಜ್ಯಕ್ಕೆ ಕರೆಸಿಕೊಂಡು ಬರ ನಿರ್ವಹಣೆಗೆ ಕಳುಹಿಸುತ್ತೇನೆ ಎಂಬ ಯಡಿಯೂರಪ್ಪನವರ ಹೇಳಿಕೆ ಸ್ವಾಗತಾರ್ಹ ಎಂದು ಅವರು ಟ್ವೀಟ್ನಲ್ಲಿ ಹೇಳಿದ್ದಾರೆ.