Webdunia - Bharat's app for daily news and videos

Install App

ನನಗೂ 100 ವರ್ಷ ಬದುಕುವ ಆಸೆಯಿದೆ, ಆಗುತ್ತೋ ಇಲ್ವೋ ಗೊತ್ತಿಲ್ಲ: ಸಿದ್ದರಾಮಯ್ಯ

Krishnaveni K
ಸೋಮವಾರ, 18 ನವೆಂಬರ್ 2024 (17:15 IST)
ಬೆಂಗಳೂರು: ನನಗೂ 100 ವರ್ಷ ಬದುಕಬೇಕೆಂಬ ಆಸೆಯಿದೆ. ಆದರೆ ನನಗೆ ಮಧುಮೇಹವಿದೆ. 100 ವರ್ಷ ಬದುಕುತ್ತೀನೋ ಇಲ್ವೋ ಗೊತ್ತಿಲ್ಲ. ಹೀಗಂತ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಇಂದು ಆಯೋಜಿಸಲಾಗಿದ್ದು ರಮಣಶ್ರೀ ಶರಣ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಅವರು ಹೀಗೆ ಹಾಸ್ಯದ ದಾಟಿಯಲ್ಲಿ ಮಾತನಾಡಿದ್ದಾರೆ.  ರಮಣಶ್ರೀ ಪ್ರಶಸ್ತಿಗೆ ಭಾಜನರಾದ ಹಿರಿಯರು 100 ವರ್ಷ ಬದುಕಲಿ ಎಂದು ಹಾರೈಸಿದ್ದಾರೆ. ನನಗೂ 100 ವರ್ಷ ಬದುಕುವ ಆಸೆ. ಆದರೆ ಅದು ಆಗುತ್ತೋ ಇಲ್ವೋ ಗೊತ್ತಿಲ್ಲ ಎಂದಿದ್ದಾರೆ.

ಮಧುಮೇಹದಿಂದ ಬಳಲುತ್ತಿರುವ ಕಾರಣ 100 ವರ್ಷ ಬದುಕಲು ನನಗೆ ಸಾಧ್ಯವಾಗದು. ವೇದಿಕೆಯಲ್ಲಿರುವ ಸಂಸದ ಬಸವರಾಜ ಬೊಮ್ಮಾಯಿಯವರಿಗೂ ಮಧುಮೇಹ ಸಮಸ್ಯೆಯಿದೆ ಎಂದು ಸಿದ್ದರಾಮಯ್ಯ ನಗುತ್ತಲೇ ಮಾತನಾಡಿದ್ದಾರೆ. ರಾಜಕಾರಣಿಗಳಿಗೆ ಶಿಸ್ತಿನ ಬದುಕು ಬದುಕಲು ಸ್ವಲ್ಪ ಕಷ್ಟ. ಇದಕ್ಕೆ ಬೊಮ್ಮಾಯಿಯವರೂ ಉದಾಹರಣೆ ಎಂದಾಗ ನೆರೆದಿದ್ದವರು ಜೋರಾಗಿ ನಕ್ಕರು.

ಇನ್ನು ರಮಣಶ್ರೀ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ, ಬಸವಣ್ಣನವರಿಗೆ ಸಂಬಂಧಪಟ್ಟ ಯಾವ ಕಾರ್ಯಕ್ರಮವನ್ನೂ ನಾವು ಮಿಸ್ ಮಾಡಲ್ಲ. ಬಸವಣ್ಣನವರ ತತ್ವಗಳಲ್ಲಿ ಕೆಲವನ್ನಾದರೂ ಅಳವಡಿಸಿಕೊಳ್ಳಲು ಪ್ರಯತ್ನಿಸುತ್ತೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments