Publish Date: Thu, 28 May 2026 (16:34 IST)
Updated Date: Thu, 28 May 2026 (16:37 IST)
ಬೆಂಗಳೂರು: ನಾನು ರಾಜೀನಾಮೆ ನೀಡಿರುವುದು ಮುಖ್ಯಮಂತ್ರಿ ಹುದ್ದೆಗೆ ಮಾತ್ರ.. ಇಲ್ಲಿಗೇ ಎಲ್ಲಾ ನಿಂತಿಲ್ಲ.. ಸಿಎಂ ಹುದ್ದೆಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಸಿದ್ದರಾಮಯ್ಯ ಹೇಳಿಕೆ ಗಮನಿಸಲೇಬೇಕು.
ಕರ್ನಾಟಕ ಸಿಎಂ ಸ್ಥಾನಕ್ಕೆ ಇಂದು ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ. ಲೋಕಭವನಕ್ಕೆ ಇಂದು ಡಿಕೆ ಶಿವಕುಮಾರ್, ಡಾ ಜಿ ಪರಮೇಶ್ವರ್ ಮತ್ತು ಮಹದೇವಪ್ಪ ಜೊತೆ ತೆರಳಿದ ಸಿದ್ದರಾಮಯ್ಯ ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಇದರ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಅವರು ವಿದಾಯ ಭಾಷಣ ಹಂಚಿಕೊಂಡಿದ್ದಾರೆ. ಈ ವೇಳೆ ಸಂವಿಧಾನವೇ ನನ್ನ ಧರ್ಮ, ಅಭಿಮಾನಿಗಳೇ ನನ್ನ ದೇವರು ಎಂದು ಹೇಳಿಕೆ ನೀಡಿದ್ದಾರೆ. ಇದರ ಜೊತೆಗೆ ಕೊನೆಯಲ್ಲಿ ಒಂದು ಮಾತು ಹೇಳಿದ್ದು ಇದು ಎಲ್ಲರ ಗಮನ ಸೆಳೆಯುವಂತಿದೆ.
ಸಂವಿಧಾನವೇ ನನಗೆ ಧರ್ಮ, ಜನರೇ ನನ್ನ ಪಾಲಿನ ದೇವರು. ನನ್ನ ರಾಜೀನಾಮೆ ಮುಖ್ಯಮಂತ್ರಿ ಹುದ್ದೆಗೆ ಮಾತ್ರವೇ ಸೀಮಿತ, ಸಕ್ರಿಯ ರಾಜಕಾರಣಕ್ಕಲ್ಲ. ನನ್ನ ಜೀವದ ಕೊನೆಯುಸಿರು ಇರುವ ವರೆಗೂ ಸಾಮಾಜಿಕ ನ್ಯಾಯಕ್ಕಾಗಿ ಮತ್ತು ಸಂವಿಧಾನ ವಿರೋಧಿ ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಟ ಮಾಡುತ್ತೇನೆ ಎಂದಿದ್ದಾರೆ. ಆ ಮೂಲಕ ಸಕ್ರಿಯ ರಾಜಕೀಯದಲ್ಲಿ ತಾನು ಇನ್ನೂ ಮುಂದುವರಿಯುವುದಾಗಿ ಸ್ಪಷ್ಟವಾಗಿ ತಿಳಿಸಿದ್ದಾರೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ