ಬೆಂಗಳೂರು: ಮುಡಾ ಸೈಟ್ ಅಕ್ರಮವಾಗಿ ಹಂಚಿಕೆ ಮಾಡಲಾಗಿದೆ ಎಂಬ ಆರೋಪಗಳಿಂದ ಬೇಸತ್ತು ನನ್ನ ಪತ್ನಿ ಪಾರ್ವತಿ ಸೈಟು ಹಿಂದಿರುಗಿಸುವ ನಿರ್ಧಾರಕ್ಕೆ ಬಂದಿದ್ದಾಳೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮುಡಾ ನೀಡಿದ್ದ 14 ಸೈಟುಗಳನ್ನು ಪಾರ್ವತಿ ಸಿದ್ದರಾಮಯ್ಯ ಹಿಂಪಡೆಯುವಂತೆ ಮುಡಾಗೆ ಪತ್ರ ಬರೆದಿದ್ದಾರೆ. ನನ್ನ ಪತಿಗೆ ರಾಜಕೀಯವಾಗಿ ಕಳಂಕ ತಂದಿರುವ ಸೈಟು ನನಗೆ ಬೇಡ ಎಂದು ಪಾರ್ವತಿ ಪತ್ರೆ ಬರೆದಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ನನ್ನ ರಾಜಕೀಯ ಧ್ವೇಷ ಸಾಧನೆಗಾಗಿ ವಿರೋಧ ಪಕ್ಷಗಳು ಸುಳ್ಳು ದೂರನ್ನು ಸೃಷ್ಟಿಸಿ ನನ್ನ ಕುಟುಂಬವನ್ನು ವಿವಾದಕ್ಕೆ ಎಳೆದು ತಂದಿರುವುದು ರಾಜ್ಯದ ಜನತೆಗೂ ಗೊತ್ತಿದೆ. ಈ ಅನ್ಯಾಯಕ್ಕೆ ತಲೆಬಾಗದೇ ಹೋರಾಟ ಮಾಡಬೇಕೆಂಬುದು ನನ್ನ ನಿಲುವಾಗಿತ್ತು. ಆದರೆ ನನ್ನ ವಿರುದ್ಧ ರಾಜಕೀಯ ಷಡ್ಯಂತ್ರದಿಂದ ಮನನೊಂದು ನನ್ನ ಪತ್ನಿ ಸೈಟುಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡು ನನಗೂ ಆಶ್ಚರ್ಯ ಉಂಟು ಮಾಡಿದ್ದಾರೆ. ನನ್ನ 40 ವರ್ಷದ ಸುದೀರ್ಘ ರಾಜಕಾರಣದಲ್ಲಿ ಒಮ್ಮೆಯೂ ಮಧ್ಯಪ್ರವೇಶಿಸದೇ ಕುಟುಂಬಕ್ಕಷ್ಟೆ ಸೀಮಿತವಾಗಿದ್ದ ನನ್ನ ಪತ್ನಿ ನನ್ನ ವಿರುದ್ಧದ ಧ್ವೇಷದ ರಾಜಕಾರಣಕ್ಕೆ ಬಲಿಯಾಗಿ ಮಾನಸಿಕವಾಗಿ ಹಿಂಸೆ ಅನುಭವಿಸುವಂತಾಗಿದ್ದಕ್ಕೆ ನನಗೆ ವಿಷಾಧವಿದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.