Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ದಲಿತರ ಅಭಿವೃದ್ಧಿಗೆ ಶ್ರಮಿಸಿದ್ದು ನಾವು: ವಾಲ್ಮೀಕಿ ಹಗರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ರೋಷಾವೇಷದ ಉತ್ತರ

Siddaramaiah

Krishnaveni K

ಬೆಂಗಳೂರು , ಗುರುವಾರ, 18 ಜುಲೈ 2024 (16:34 IST)
ಬೆಂಗಳೂರು: ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಕಳೆದ ಎರಡು ದಿನಗಳಿಂದ ಸದನದಲ್ಲಿ ವಿಪಕ್ಷಗಳು ಮಾಡುತ್ತಿರುವ ಆರೋಪಗಳಿಗೆ ಇಂದು ಸಿಎಂ ಸಿದ್ದರಾಮಯ್ಯ ಉತ್ತರ ನೀಡಿದ್ದಾರೆ.  ನಿಯಮ‌ 69ರ ಅಡಿಯಲ್ಲಿ ನಡೆದ ವಾಲ್ಮೀಕಿ ಅಭಿವೃದ್ಧಿ ನಿಗಮ ಕುರಿತಾದ ಚರ್ಚೆಗೆ ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದರು.
 

ಆರ್.ಅಶೋಕ್, ವಿಜಯೇಂದ್ರ ನನ್ನ ರಾಜೀನಾಮೆ ಕೇಳಿದ್ದಾರೆ. ಆರಗ ಜ್ಞಾನೇಂದ್ರ ಮಾಜಿ ಗೃಹ ಸಚಿವರು. ಇವರು SIT ಹಿಂದಕ್ಕೆ ಪಡೆಯಿರಿ ಎಂದು ಹೇಳಿದ್ದಾರೆ. ನೀವು ಗೃಹ ಮಂತ್ರಿ ಆಗಿದ್ದಾಗಲೂ SIT ಬಗ್ಗೆ ಹೀಗೆ ಹೇಳಿದ್ದೀರಾ? ಎಂದು ಮೊದಲು ವಿಪಕ್ಷಗಳಿಗೆ ಚಾಟಿ ಬೀಸಿದರು.

ಸಿಎಂ ಮಾತಿನ ಸಾರಾಂಶ ಇಲ್ಲಿದೆ. 26-5-2024 ರಂದು ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡರು. ಇವರು ತಮಿಳುನಾಡಿನ ಬೋವಿ ಸಮುದಾಯದವರು. ವಿರೋಧ ಪಕ್ಷದವರು ಸಾವಿರ ಸಾರಿ ದಲಿತ,  ದಲಿತ ಅಂತ ಮಾತಾಡಿದಾರೆ. ಸಂವಿಧಾನದಲ್ಲಿ ಪರಿಶಿಷ್ಟ ಜಾತಿ/ವರ್ಗ ಎನ್ನುವ ಉಲ್ಲೇಖ ಇದೆ. ಇಬ್ಬರೂ ಸೇರಿ 24.1% ಜನಸಂಖ್ಯೆ ಇದ್ದಾರೆ. ಇವರ ಅಭಿವೃದ್ಧಿ ಆದರೆ ಮಾತ್ರ ಸಮ ಸಮಾಜದ ಆಶಯ ಈಡೇರುತ್ತದೆ. ಈ ಸಮುದಾಯಗಳಿಗೆ ಆರ್ಥಿಕ, ಸಾಮಾಜಿಕ ಶಕ್ತಿ ಬರುತ್ತದೆ. ಅಸಮಾನತೆ ಇರುವವರೆಗೂ ಸಮಾನತೆ ಸಾಧ್ಯವಿಲ್ಲ. ಸಂವಿಧಾನ ಬಂದು 70 ವರ್ಷ ಆದರೂ ಸಮಾನತೆ ಸಿಕ್ಕಿಲ್ಲ. ಇದನ್ನು ಸರಿಪಡಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಹೀಗಾಗಿ ವಾಲ್ಮೀಕಿ, ಬೋವಿ, ಆದಿಜಾಂಭವ, ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ ಸೇರಿ ಹಲವು ಅಭಿವೃದ್ಧಿ ನಿಗಮಗಳು ಆರಂಭಿಸಲಾಗಿದೆ.

ಈ ಎಲ್ಲಾ ನಿಗಮಗಳ ಉದ್ದೇಶ ಆಯಾ ಸಮುದಾಯಗಳನ್ನು ಆರ್ಥಿಕವಾಗಿ ಬಲಿಷ್ಠರನ್ನಾಗಿಸುವುದೇ ಆಗಿದೆ. 2013 ಡಿಸೆಂಬರ್ ನಲ್ಲಿ SCP/TSP ಕಾಯ್ದೆ ಜಾರಿ ಮಾಡಿದೆ. ನಾನು ಮುಖ್ಯಮಂತ್ರಿಯಾಗಿ ಜಾರಿ ಮಾಡಿದೆ. 24.1% ಅಭಿವೃದ್ಧಿ ಹಣ ಈ ಸಮುದಾಯದ ಅಭಿವೃದ್ಧಿಗೆ ಮೀಸಲಿಡಬೇಕು ಎಂದು ಕಡ್ಡಾಯ ಮಾಡಿದ್ದು ನಾನು. ನೀವು ಬರಿ ಮೊಸಳೆ ಕಣ್ಣೀರು ಹರಿಸುತ್ತೀರಿ.

1949 ರ ನವೆಂಬರ್ 25 ರಂದು ಸಂವಿಧಾನ ಸಭೆಯಲ್ಲಿ ಮಾಡಿದ ಭಾಷಣದಲ್ಲಿ, "ಜನವರಿ 26-1950 ಕ್ಕೆ ಸಂವಿಧಾನ ಜಾರಿಗೆ ಬಂದಿದೆ. ನಾವೆಲ್ಲರೂ ವೈರುಧ್ಯತೆ ಇರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ ಎಂದು ಚರಿತ್ರಾರ್ಹವಾದ ಭಾಷಣದಲ್ಲಿ ಹೇಳಿದರು.
ನಾವು ಪ್ರಜಾಪ್ರಭುತ್ವ ಒಪ್ಪಿಕೊಂಡಿದ್ದೇವೆ. ಇಂಥಾ ಸಮಾಜಕ್ಕೆ ಕಾಲಿಟ್ಟಾಗ ಆರ್ಥಿಕವಾಗಿ, ಸಾಮಾಜಿಕವಾಗಿ ಇನ್ನೂ ಅಸಮಾನತೆ ಉಳಿದುಕೊಂಡಿದೆ.

ನಾನು ಹಿಂದಿನ ಸಿದ್ದರಾಮಯ್ಯ ಅಲ್ಲ ಅಂತ ಯತ್ನಾಳ್ ಅವರು ಹೇಳಿದರು. ಯತ್ನಾಳ್ ಅವರು ಕೂಡ ವಾಜಪೇಯಿ ಅವರ ಸಂಪುಟದಲ್ಲಿದ್ದ ಯತ್ನಾಳ್ ಆಗಿ ಉಳಿದಿಲ್ಲ ಈಗ. ಆರ್.ಅಶೋಕ್ ಮೂರು ಗಂಟೆ ನಾಲ್ಲು ನಿಮಿಷ ಸದನದಲ್ಲಿ ಆರೋಪಿಸಿದ್ದೆಲ್ಲಾ ಪತ್ರಿಕಾ ಸುದ್ದಿಗಳ ಆಧಾರದಲ್ಲಿ ಮಾತ್ರ.

ಇದು ST ವರ್ಗದ ಅಭಿವೃದ್ಧಿಗೆ ಮೀಸಲಾದ ನಿಗಮ. ನಮ್ಮ ಸರ್ಕಾರ ಬಂದ ಮೇಲೆ ಇಡೀ ದೇಶದಲ್ಲಿ Scsp/tsp ಕಾಯ್ದೆ ತಂದವರು ನಾವು. ಪರಿಶಿಷ್ಠ ಸಮುದಾಯಗಳ ಬಗ್ಗೆ ಪ್ರಾಮಾಣಿಕ ಕಾಳಜಿ ಇದ್ದಿದ್ದರೆ ಕೇಂದ್ರದ ಬಿಜೆಪಿಯಾಗಲಿ, ಅವರು ಅಧಿಕಾರದಲ್ಲಿರುವ ರಾಜ್ಯಗಳಲ್ಲಾಗಲಿ scsp/tsp ಕಾಯ್ದೆಯನ್ನು ಏಕೆ ಜಾರಿಗೆ ತಂದಿಲ್ಲ? 

ಇಡೀ ದೇಶದಲ್ಲಿ ಕರ್ನಾಟಕ ಮಾತ್ರ ಇಂಥಾ ಪರಿಣಾಮಕಾರಿ ಕಾಯ್ದೆಯನ್ನು sC/st ಸಮುದಾಯಗಳಿಗಾಗಿ ಜಾರಿ ಮಾಡಿದ್ದೇವೆ. ಗುತ್ತಿಗೆಯಲ್ಲೂ SC-ST ಸಮುದಾಯಗಳಿಗೆ ಮೀಸಲಾತಿ ಜಾರಿ ಮಾಡಿರುವುದು ನಾವು ಮಾತ್ರ. ಇಂಥಾದ್ದನ್ನು ಬಿಜೆಪಿ ಯವರು ಇದುವರೆಗೂ ಏಕೆ ಜಾರಿ ಮಾಡಿಲ್ಲ. SC-ST ಉದ್ದಿಮೆಗಳಿಗೆ / ಉದ್ಯಮಗಳಿಗೆ ವಿಶೇಷ ಸಾಲದ ಸವಲತ್ತು , KIADB ಭೂಮಿ ವಿಚಾರದಲ್ಲಿ ಈ ಸಮುದಾಯಗಳಿಗೆ ಅನುಕೂಲ ಮಾಡಿ ಕಾನೂನು ತಂದವರು ನಾವು.

ನಾವು SC-ST ಸಮುದಾಯದವರ ವಿರೋಧಿಯಾಗಿದ್ದರೆ ಇಷ್ಟೆಲ್ಲವನ್ನೂ ಜಾರಿ ಮಾಡಲು ಆಗುತ್ತಿತ್ತಾ ? ಕಾಂಗ್ರೆಸ್ ಇರುವವರೆಗೂ, ನಾನು ಇರುವವರೆಗೂ ಸಾಮಾಜಿಕ ನ್ಯಾಯಕ್ಕೆ ನಾವು ಬದ್ದರು. ನಿಮ್ಮಿಂದ ಸಾಮಾಜಿಕ ನ್ಯಾಯದ ಪಾಠ ಹೇಳಿಸಿಕೊಳ್ಳುವ ಅಗತ್ಯವಿಲ್ಲ.

ನಾವು ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡ ಬಳಿಕ ಅವರ ಪತ್ನಿ ಕೊಟ್ಡ ದೂರಿನ ಆಧಾರದಲ್ಲಿ FIR ದಾಖಲಿಸಿ ತನಿಖೆ ಶುರು ಮಾಡಿದೆವು. ನಿಗಮದ ಜನರಲ್ ಮ್ಯಾನೇಜರ್ ರಾಜಶೇಖರ್ ಕೊಟ್ಟ ಆರು ಮಂದಿ ವಿರುದ್ದ ನೀಡಿದ ದೂರಿನ ಆಧಾರದಲ್ಲೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯ ವಿಧಾನಸೌಧದಿಂದ ಓಡಿ ಹೋಗುವಂತೆ ಮಾಡಬೇಕು: ಬಿ ವೈ ವಿಜಯೇಂದ್ರ ಕರೆ