Publish Date: Mon, 21 Nov 2022 (09:07 IST)
Updated Date: Mon, 21 Nov 2022 (09:08 IST)
ಕೊಪ್ಪಳ : ಒಂದೆಡೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರಾಜ್ಯಾದ್ಯಂತ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸುತ್ತಿದ್ದಾರೆ.
ಮತ್ತೊಂದೆಡೆ ಮಾಜಿ ಸಿಎಂ ಸಿದ್ದರಾಮಯ್ಯ ಮದುವೆ ಕಾರ್ಯಕ್ರಮದ ವೇದಿಕೆಯಲ್ಲೇ ಕೊಪ್ಪಳ ಜಿಲ್ಲೆಯ 5 ಅಭ್ಯರ್ಥಿಗಳನ್ನ ಘೋಷಣೆ ಮಾಡುವ ಮೂಲಕ ಡಿಕೆಶಿಗೆ ಸೆಡ್ಡು ಹೊಡೆದಿದ್ದಾರೆ.
ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಅವರ ಸಹೋದರ ಸಂಬಂಧಿಯೊಬ್ಬರ ಮದುವೆಯಲ್ಲಿ ಭಾಗವಹಿಸಲು ಕೊಪ್ಪಳ ತಾಲೂಕಿನ ವಣಬಳ್ಳಾರಿ ಗ್ರಾಮಕ್ಕೆ ಇಂದು ಆಗಮಿಸಿದ್ದ ಸಿದ್ದರಾಮಯ್ಯ,
ಮದುವೆ ಕಾರ್ಯಕ್ರಮದಲ್ಲೂ ರಾಜಕೀಯ ಭಾಷಣ ಮಾಡುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಕರ್ನಾಟಕ ರಾಜಕಾರಣದಲ್ಲಿ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ.
Ramya kosira
Publish Date: Mon, 21 Nov 2022 (09:07 IST)
Updated Date: Mon, 21 Nov 2022 (09:08 IST)