Publish Date: Thu, 30 Mar 2023 (20:55 IST)
Updated Date: Thu, 30 Mar 2023 (20:18 IST)
ಶ್ರೀ ರಾಮನವಮಿ ದಿನದಂದು ವಿಪಕ್ಷನಾಯಕ ಸಿದ್ದರಾಮಯ್ಯ ಅವರನ್ನ ಬಿಜೆಪಿ ಟ್ವೀಟ್ ನಲ್ಲಿ ಕಾಲೆಳೆದಿದ್ದು ಅದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಕೌಂಟರ ಕೊಟ್ಟಿದ್ದಾರೆ.ಮಹಾತ್ಮ ಗಾಂಧಿಯವರು ನಂಬಿದ್ದ ಮಾನವೀಯ ಗುಣಗಳ, ಮಾತೃಹೃದಯದ, ಸರ್ವವನ್ನೂ ಪ್ರೀತಿಸುವ ರಾಮನ ಅನುಯಾಯಿ ನಾನು.ರಾಮನ ಹೆಸರಿನಲ್ಲಿ ದ್ವೇಷಬಿತ್ತಿ, ಮನಸುಗಳನ್ನು ಒಡೆದು ಚುನಾವಣೆಯಲ್ಲಿ ಲಾಭ ಪಡೆಯುವವರು ನೀವು.ನನ್ನ ರಾಮ ಅಂತಃಕರಣ ಸ್ವರೂಪಿ,ನಿಮಗೆ ರಾಮ ಚುನಾವಣಾ ಸರಕು. ಶ್ರೀರಾಮನೇ ನಿಮಗೆ ಸದ್ಬುದ್ಧಿ ನೀಡಲಿ ಎಂದು ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ.