Webdunia - Bharat's app for daily news and videos

Install App

ಉತ್ತರ ಕನ್ನಡ ಜಿಲ್ಲೆಯ ನೆರೆ ಸಂತ್ರಸ್ತರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಸಿದ್ದರಾಮಯ್ಯ

Webdunia
ಮಂಗಳವಾರ, 3 ಆಗಸ್ಟ್ 2021 (09:10 IST)
Karnataka Rains Today:(ಆ.03): ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರ ಕ್ಷೀಣಿಸತೊಡಗಿದೆ. ಜುಲೈ ತಿಂಗಳಲ್ಲಿ ವರುಣನ ಆರ್ಭಟಕ್ಕೆ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದರು. ಭಾರೀ ಮಳೆಗೆ ರಾಜ್ಯದಲ್ಲಿ ನದಿಗಳು ಪ್ರವಾಹ ಮಟ್ಟದಲ್ಲಿ ಹರಿಯುತ್ತಿದ್ದು, ಜನರಿಗೆ ಆತಂಕ ಮೂಡಿಸಿದ್ದವು. ಬಹುತೇಕ ಡ್ಯಾಂಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗಿತ್ತು.

ಇದರಿಂದ ನದಿಪಾತ್ರದ ಜನರಿಗೆ ಪ್ರವಾಹ ಭೀತಿ ಎದುರಾಗಿತ್ತು. ಈ ನದಿ ಹರಿವಿನ ಪ್ರಮಾಣ ಕಡಿಮೆಯಾಗಿದ್ದು, ಪ್ರವಾಹ ಭೀತಿಯೂ ಕಡಿಮೆಯಾಗಿದೆ. ಹಲವೆಡೆ ಮನೆಗಳು ಕುಸಿದಿದ್ದವು. ಇನ್ನೂ ಕೆಲವೆಡೆ ಸೇತುವೆಗಳು ಮುಳುಗಡೆಯಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿತ್ತು. ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಬೆಳೆಗಳು ನಾಶವಾಗಿದ್ದವು. ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿಗಳು ಜಲಾವೃತಗೊಂಡಿದ್ದವು. ಸದ್ಯ ಮಳೆ ನಿಂತರೂ, ಮಳೆಯಿಂದಾಗಿರುವ ಹಾನಿಯಿಂದ ಸುಧಾರಿಸಿಕೊಳ್ಳಲು ಸಾಕಷ್ಟು ಸಮಯ ಬೇಕಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ಸೋಮವಾರ(ನಿನ್ನೆ) ಪ್ರವಾಹ ಪೀಡಿತ ಉತ್ತರ ಕನ್ನಡ ಜಿಲ್ಲೆಯ ಕದ್ರಾ ಮತ್ತು ಮಲ್ಲಾಪುರ ಗ್ರಾಮಗಳಿಗೆ ಭೇಟಿ ನೀಡಿ ನೆರೆ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಪ್ರತೀ ವರ್ಷ ಮಳೆಗಾಲದಲ್ಲಿ ಇದೇ ಪರಿಸ್ಥಿತಿ ಎದುರಾಗುತ್ತದೆ. ಮುನ್ಸೂಚನೆ ನೀಡದೆ ಏಕಾಏಕಿ ಕದ್ರಾ ಡ್ಯಾಂನಿಂದ ನೀರು ಬಿಡುತ್ತಾರೆ. ಗಂಗಾವಳಿ ನದಿ ದಡದಲ್ಲಿರುವ ಜನರ ಪಾಡು ಹೇಳತೀರದಾಗಿದೆ. ಇರಲು ಮನೆಯೂ ಇಲ್ಲ, ಎಲ್ಲವೂ ನೀರಲ್ಲಿ ಕೊಚ್ಚಿಕೊಂಡು ಹೋಗಿದೆ. ಸರ್ಕಾರ ಪರಿಹಾರವನ್ನೂ ನೀಡಿಲ್ಲ ಎಂದು ಅಲ್ಲಿನ ಮಹಿಳೆಯರು ತಮ್ಮ ಗೋಳು ತೋಡಿಕೊಂಡರು.
ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ, ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆ ಮತ್ತು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ.
ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲೂಕಿನ ಕೊರ್ಲಕೈನಲ್ಲಿ 68 ಮಿ.ಮೀ ಮಳೆಯಾಗಿದೆ. ನಿನ್ನೆ ರಾಜ್ಯದಲ್ಲಿ ಅತೀ ಹೆಚ್ಚು ಮಳೆಯಾಗಿರುವ ಪ್ರದೇಶ ಇದಾಗಿದೆ.
ಕರ್ನಾಟಕದ ಕರಾವಳಿ ಭಾಗದಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ. ಮಂಗಳೂರು ಕರಾವಳಿಯಿಂದ ಕರ್ನಾಟಕ ಕರಾವಳಿವರೆಗೆ ಇಂದು ವ್ಯಾಪಕ ಮಳೆಯಾಗಲಿದೆ. ಮಲೆನಾಡು ಭಾಗದ ಜಿಲ್ಲೆಗಳಲ್ಲೂ ಇಂದು ಮಳೆ ಸುರಿಯಲಿದೆ. ಜೊತೆಗೆ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ದಾವಣಗೆರೆ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ.ಇನ್ನು, ಉತ್ತರ ಒಳನಾಡಿನಲ್ಲೂ ಸಹ ಸಾಧಾರಣ ಮಳೆಯಾಗಲಿದೆ. ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ನಿರೀಕ್ಷೆ ಇದೆ.ರಾಜ್ಯದ ಮಲೆನಾಡು ಭಾಗದಲ್ಲಿ ಇಂದು ಕೊಂಚ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಉಡುಪಿ ಜಿಲ್ಲೆಯಾದ್ಯಂತ ಅಧಿಕ ಮಳೆಯಾದರೆ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಜುಲೈ ತಿಂಗಳಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸುರಿದ ಧಾರಾಕಾರ ಮಳೆಗೆ ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ. ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸುಮಾರು 31,360 ಮಂದಿಯನ್ನು ತಗ್ಗು ಪ್ರದೇಶಗಳಿಂದ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಸುಮಾರು 22,417 ಜನರು 237 ನಿರಾಶ್ರಿತ ಕೇಂದ್ರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ಪ್ರಕಾರ, ಸುಮಾರು 283 ಗ್ರಾಮಗಳು, 45 ತಾಲೂಕುಗಳು ಮಳೆಯ ಹೊಡೆತಕ್ಕೆ ಸಿಕ್ಕಿದ್ದು, 36,498 ಜನರು ಅಕ್ಷರಶಃ ನಲುಗಿದ್ದಾರೆ.
ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಈ ವರ್ಷ ಮಳೆಯಿಂದಾಗಿ 9 ಮಂದಿ ಸಾವನ್ನಪ್ಪಿದ್ದು, ಮೂರು ಜನರು ಕಣ್ಮರೆಯಾಗಿದ್ದಾರೆ. ಸುಮಾರು 3,502 ವಿದ್ಯುತ್ ಕಂಬಗಳು ಧರೆಗುರುಳಿವೆ. 342 ಟ್ರಾನ್ಸ್ಫಾರ್ಮರ್ಗಳು ಹಾನಿಯಾಗಿದ್ದು, ಹಲವಾರು ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಡಿತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಬೆಂಗಳೂರು ಮಳೆಯಲ್ಲಿ ಮುಳುಗಿರುವಾಗ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

ಮುಂದಿನ ಸುದ್ದಿ
Show comments