ಬೆಂಗಳೂರು : ರಾಜ್ಯದಲ್ಲಿ ಹಿಂದ ಹೋರಾಟದ ಚರ್ಚೆ ನಡೆಯುತ್ತಿರುವ ಈ ವೇಳೆಯಲ್ಲಿ ಮತ್ತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಕೃತಿ ಚಿಕಿತ್ಸೆಗೆ ಹೊರಟಿದ್ದಾರೆ. ಈ ಬಗ್ಗೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ.
ಫೆ.25ರಂದು ಸಿದ್ದರಾಮಯ್ಯ ಧರ್ಮಸ್ಥಳದ ಶಾಂತಿವನಕ್ಕೆ ತೆರಳಿದ್ದಾರೆ. 8 ದಿನಗಳ ಕಾಲ ಶಾಂತಿವನದಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ಪ್ರಕೃತಿ ಚಿಕಿತ್ಸೆಯ ಬಳಿಕ ರಾಜ್ಯ ಪ್ರವಾಸಕ್ಕೆ ಸಿದ್ದರಾಮಯ್ಯ ಪ್ಲ್ಯಾನ್ ಮಾಡಿದ್ದಾರೆ.
ಈ ಹಿನ್ನಲೆಯಲ್ಲಿ ಶಾಂತಿವನದಲ್ಲಿಯೇ ಸಿದ್ದರಾಮಯ್ಯ ಹಿಂದ ರಣತಂತ್ರ ರೂಪಿಸುತ್ತಾರಾ? ಹಿಂದ ಸಮಾವೇಶದ ರೂಪರೇಷ ಸಿದ್ಧಪಡಿಸ್ತಾರಾ ಸಿದ್ದರಾಮಯ್ಯ? ಎಂಬ ಪ್ರಶ್ನೆ ಹಲವರಲ್ಲಿ ಮೂಡಿದೆ ಎನ್ನಲಾಗಿದೆ.