Publish Date: Fri, 31 Aug 2018 (10:40 IST)
Updated Date: Fri, 31 Aug 2018 (10:42 IST)
ಬೆಂಗಳೂರು: ಒಂದೆಡೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಸಿಎಂ ಆಗುವೆ ಎಂದು ಹೇಳಿಕೆ ನೀಡುತ್ತಿದ್ದರೆ, ಸಮ್ಮಿಶ್ರ ಸರ್ಕಾರದ ಸಚಿವ ಎನ್ ಮಹೇಶ್ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲು ಸಾಧ್ಯವಿಲ್ಲ ಎಂದಿದ್ದಾರೆ.
ಬಿಎಸ್ ಪಿ ಶಾಸಕರಾಗಿರುವ ಎನ್ ಮಹೇಶ್ ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ‘ಸದ್ಯಕ್ಕೆ ಕುಮಾರಸ್ವಾಮಿ ನೇತೃತ್ವದಲ್ಲಿ ಸಮ್ಮಿಶ್ರ ಸರ್ಕಾರ ನಡೆಯುತ್ತಿದೆ. ಪೂರ್ತಿ ಅವಧಿವರೆಗೆ ಅವರೇ ಮುಖ್ಯಮಂತ್ರಿ. ಅವರು ಹಲವು ಜನಪರ ಯೋಜನೆಗಳನ್ನು ನೀಡುವ ಕನಸು ಕಟ್ಟಿದ್ದಾರೆ. ಅವರ ಕೆಲಸ ಮಾಡಲು ಅವರಿಗೆ ಅವರ ಕೆಲಸ ಮಾಡಲು ಬಿಡಿ’ ಎಂದು ಪ್ರೌಢ ಶಿಕ್ಷಣ ಸಚಿವರಾಗಿರುವ ಮಹೇಶ್ ಹೇಳಿದ್ದಾರೆ.
ಇನ್ನು ಸಿದ್ದರಾಮಯ್ಯ ಮತ್ತೆ ಸಿಎಂ ಆಗಲು ಸಾಧ್ಯವಿಲ್ಲ. ಕುಮಾರಸ್ವಾಮಿಯವರೇ ಪೂರ್ಣ ಅವಧಿಗೆ ಮುಖ್ಯಮಂತ್ರಿ ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.