Publish Date: Mon, 08 Aug 2022 (16:42 IST)
Updated Date: Mon, 08 Aug 2022 (16:46 IST)
ಸಿದ್ದರಾಮೋತ್ಸವ ಸ್ಟಿರಾಯ್ಡ್ ಇದ್ದಂತೆ. ಬಹಳ ಕಾಲ ಪರಿಣಾಮ ಬೀರುವುದಿಲ್ಲ ಎಂದು ಸಚಿವ ಸಿ.ಸಿ.ಪಾಟೀಲ್ ಹೇಳಿದ್ದಾರೆ. ಗದಗದಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಮಾದರಿಯ ಸಮಾವೇಶಗಳನ್ನು ನಾವು ದಿನಕ್ಕೊಂದು ಮಾಡುತ್ತೇವೆ. ವಿರೋಧ ಪಕ್ಷದವರಿಗೆ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಇಂತಹ ಸಮಾವೇಶ ಅನಿವಾರ್ಯ. ರಾಜ್ಯದಲ್ಲಿ ಸಾಕಷ್ಟು ಮಳೆಯಾಗಿದ್ದು, ಕೆಲವೆಡೆ ತೀವ್ರ ಹಾನಿಯಾಗಿದೆ. ಮುಖ್ಯಮಂತ್ರಿ ಬೊಮ್ಮಾಯಿಗೆ ಕೊರೋನಾ ಪಾಸಿಟಿವ್ ಇದ್ದರೂ ವಿಡಿಯೋ ಕಾನ್ಫ್ರೆನ್ಸ್ ಮೂಲಕ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಮಧ್ಯಂತರ ಪರಿಹಾರ ನೀಡಿದ್ದಾರೆ. ನಗರದಲ್ಲಿ ಹಾನಿಯಾಗಿರುವ ರಸ್ತೆ ದುರಸ್ತಿಗೆ ಅನುದಾನ ಬಿಡುಗಡೆ ಮಾಡಲಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ಹೇಳಿದ್ದಾರೆ.
geetha
Publish Date: Mon, 08 Aug 2022 (16:42 IST)
Updated Date: Mon, 08 Aug 2022 (16:46 IST)