Publish Date: Wed, 11 Dec 2019 (10:13 IST)
Updated Date: Wed, 11 Dec 2019 (10:15 IST)
ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಬೆಳಿಗ್ಗೆ ಅವರಿಗೆ ರಕ್ತದೊತ್ತಡ ಹೆಚ್ಚಾಗಿದ್ದು, ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಪಚುನಾವಣೆಯ ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿದ್ದ ತೊಡಗಿದ್ದ ಪರಿಣಾಮ ಅವರ ಆರೋಗ್ಯ ಹದಗೆಟ್ಟಿದೆ. ಪರೀಕ್ಷೆ ಮಾಡಿ ಮನೆಗೆ ಕಳುಹಿಸುವುದಾಗಿ ವೈದ್ಯರು ತಿಳಿಸಿದ್ದಾರೆ.