Publish Date: Tue, 24 Sep 2019 (11:05 IST)
Updated Date: Tue, 24 Sep 2019 (11:08 IST)
ಬೆಂಗಳೂರು : ಕಾಂಗ್ರೆಸ್ ನಾಯಕರ ವಿರುದ್ಧ ಮಾತನಾಡಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಸಿದ್ದರಾಮಯ್ಯ ಸಾಕಿದ ಗಿಣಿಗಳು ಅವರನ್ನೇ ಹದ್ದಾಗಿ ಕುಕ್ಕಿದವು ಎಂದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಕುಮಾರಸ್ವಾಮಿ, ನಿನ್ನೆ ಯಾರೋ ಹದ್ದಾಗಿ ಕುಕ್ಕಿತ್ತಲ್ಲೋ ಎಂದು ಭಾಷಣ ಮಾಡಿದ್ದಾರೆ. ಆದರೆ ಕೆ.ಹೆಚ್. ಮುನಿಯಪ್ಪರನ್ನು ಕುಕ್ಕಿದ್ದು ಯಾರು ಅಂತ ಅವರೇ ಹೇಳಲಿ ಎಂದು ಹೇಳಿದ್ದರು.
ಇದಕ್ಕೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಹೌದು, ಹೆಚ್.ಡಿ.ಕುಮಾರಸ್ವಾಮಿ ಅವರೇ, ನಾನೇ ನಂಬಿದ ಗಿಣಿಗಳು ಹದ್ದಾಗಿ ಕಾಡಿದ್ದು ನಿಜ. ನನ್ನದೇ ತಪ್ಪು, ನಾಲ್ಕು ದಶಕಗಳ ರಾಜಕೀಯ ಒಡನಾಟದ ಅನುಭವದ ನಂತರವೂ ಹದ್ದನ್ನು ಗಿಣಿಯೆಂದು ಭ್ರಮಿಸಿ ಮೈತ್ರಿ ಮಾಡಿಕೊಂಡೆವು. ಕುಕ್ಕದೇ ಬಿಡುತ್ತಾ? ಅನುಭವಕ್ಕಿಂತ ದೊಡ್ಡ ಪಾಠ ಏನಿದೆ ಹೇಳಿ? ಎಂದು ತಿರುಗೇಟು ನೀಡಿದ್ದಾರೆ.