Publish Date: Sun, 20 Oct 2019 (08:46 IST)
Updated Date: Sun, 20 Oct 2019 (08:52 IST)
ಮೈಸೂರು : ಆರ್ ಎಸ್ ಎಸ್ ನವರು ಬರೀ ಗೋಹತ್ಯೆ ಬಗ್ಗೆ ಭಾಷಣ ಮಾಡುತ್ತಾರೆ. ಅವರು ಯಾವತ್ತಾದರೂ ಸಗಣಿ ಎತ್ತಿದ್ದಾರಾ?ಹಸು ಸಾಕಿದ್ದಾರಾ? ಎಂದು ಸಿದ್ದರಾಮಯ್ಯ ಆರ್ ಎಸ್ ಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಗುಂಪು ಹತ್ಯೆ ಹೆಚ್ಚಾಗಿವೆ. ಆರ್ ಎಸ್ ಎಸ್ ನ ಮುಖ್ಯಸ್ಥ ಮೋಹನ್ ಭಾಗವತ್ ಇದನ್ನು ಸಮರ್ಥನೆ ಮಾಡಿಕೊಳ್ಳುತ್ತಾರೆ. ಸಗಣಿ ಎತ್ತದವರು ಗೋ ರಕ್ಷಣೆ ಹೆಸರಿನಲ್ಲಿ ಗುಂಪು ಹತ್ಯೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಬಿಜೆಪಿಗೂ ಹಿಟ್ಲರ್ ಗೂ ಯಾವ ವ್ಯತ್ಯಾಸವೂ ಇಲ್ಲ. ಒಂದು ಸುಳ್ಳನ್ನು ನೂರು ಬಾರಿ ಹೇಳಿ ಅದನ್ನೇ ಸತ್ಯ ಮಾಡಿದರು. ನಾವು ಆ ಸುಳ್ಳನ್ನು ಹಿಮ್ಮೆಟ್ಟಿಸಿ ಸತ್ಯ ಹೇಳಲಿಲ್ಲ. ಹೀಗಾಗಿ ನಾವು ಚುನಾವಣೆಯಲ್ಲಿ ಸೊಲಬೇಕಾಯಿತು ಎಂದು ಅವರು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.