ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ನಡುವಿನ ವಾಕ್ಸಮರ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ ದೇವೇಗೌಡರು ಪ್ರತಿಕ್ರಿಯಿಸಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ನಾನು ಯಾವತ್ತೂ ಮಾತನಾಡಿಲ್ಲ. ಅವರ ಮೇಲೆ ಯಾವಾಗಲೂ ಗೌರವ ಇದೆ. ಇನ್ನು ಹೆಚ್.ವಿಶ್ವನಾಥ್ ಅವರ ಹೇಳಿಕೆಯನ್ನ ಗಂಭೀರವಾಗಿ ಪರಿಗಣಿಸಬಾರದು ಎಂದು ಸಚಿವ ಜಿ.ಟಿ ದೇವೇಗೌಡ ತಿಳಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಸಚಿವ ಜಿ.ಟಿ ದೇವೇಗೌಡ, ಸಿದ್ದರಾಮಯ್ಯ ಅವರು ನನ್ನ ಬಗ್ಗೆ ಟ್ವಿಟ್ ಮಾಡಿದ್ದಾರಂತೆ. ಆದರೆ ಅದನ್ನು ನಾನು ನೋಡಿಲ್ಲ. ಅವರು ಮೊದಲು ಜಿಟಿಡಿ ಮಾತನಾಡಿದ್ರು, ಈಗ ವಿಶ್ವನಾಥ್ ಮಾತನಾಡಿದ್ದಾರೆ. ಆದ್ರೆ ಅವರೇನು ಚುನಾವಣೆ ಬಗ್ಗೆ ಮಾತನಾಡಿಲ್ಲ. ಆದರೇ ಅವರು ಯಾಕೆ ನನ್ನ ಹೆಸರು ಹೇಳಿದ್ದಾರೋ ಗೊತ್ತಿಲ್ಲ ಎಂದು ಹೇಳಿದರು.
ಚುನಾವಣೆ ಬಗ್ಗೆ ಯಾರೂ ಏನೂ ಹೇಳಿದರೂ ವೆಸ್ಟ್ : ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ಹೇಳಿಕೆ ವಿಚಾರ ಕುರಿತು ಮಾತನಾಡಿದ ಸಚಿವ ಜಿ.ಟಿ ದೇವೇಗೌಡ, ಜನಪ್ರತಿನಿಧಿಗಳು ಜವಬ್ದಾರಿಯಿಂದ ಮಾತನಾಡಬೇಕು.
ಸಿದ್ದರಾಮಯ್ಯನವರೇ 5 ವರ್ಷ ಕುಮಾರಸ್ವಾಮಿ ಸಿಎಂ ಅಂತ ಹೇಳಿದ್ದಾರೆ. ಇನ್ಯಾಕೇ ಬೇರೆ ಮಾತು. ಅವರ ಹೇಳಿಕೆಗಳನ್ನ ಗಂಭೀರವಾಗಿ ಪರಿಗಣಿಸಿಬಾರದು. 23 ರ ರಿಸಲ್ಟ್ ಬರುವವರೆಗೂ ಎಲ್ಲರ ಹೇಳಿಕೆಯೂ ವೆಸ್ಟ್. ಯಾರು ಏನೇ ಹೇಳಿಕೆ ಕೊಟ್ಟರೂ ರಿಸಲ್ಟ್ ಬರೋವರೆಗೆ ಎಲ್ಲವು ವೆಸ್ಟ್ ಎಂದು ಜಿ.ಟಿ ದೇವೇಗೌಡ ನುಡಿದಿದ್ದಾರೆ.